ಉಡುಪಿಯ ಅಂಬಲಪಾಡಿಯಲ್ಲಿ ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ!

Date:

spot_img

ಉಡುಪಿ: ಉಡುಪಿ ನಗರದ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿ ಎಂಬಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ಯುವ ಪ್ರೇಮಿಗಳಿಬ್ಬರು ಮನೆಯಲ್ಲಿ ಚೂಡಿದಾರದ ವೇಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಗುರುವಾರ ಸಂಜೆ ನಡೆದಿದೆ.

ಯುವತಿ ವಾಸವಾಗಿದ್ದ ಬಾಡಿಗೆ ಜೋಪಡಿಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಯುವಕ ಮತ್ತು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕರನ್ನು ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17) ಮತ್ತು ವಲಸೆ ಕಾರ್ಮಿಕನಾದ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಘಟನೆಯ ಮಾಹಿತಿ ತಿಳಿದ ಕೂಡಲೇ ನಗರ ಪೊಲೀಸ್ ಠಾಣೆಯ ಎಸ್.ಐ ಭರತೇಶ್, ಎ.ಎಸ್.ಐ ಪರಮೇಶ್ವರ್ ಕೆ, ಎ.ಎಸ್.ಐ ರಮೇಶ್, ಮುಖ್ಯ ಆರಕ್ಷಕ ಜಯಕರ್‌ ಅವರು ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆಗಳನ್ನು ನಡೆಸಿದರು.

ಈ ಸಂದರ್ಭದಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಎರಡು ಮೃತದೇಹಗಳನ್ನು ನೇಣುಕುಣಿಕೆಯಿಂದ ತೆರವುಗೊಳಿಸಿ, ಅಂಬುಲೆನ್ಸ್ ವಾಹನದಲ್ಲಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಘಟಕಕ್ಕೆ ಸಾಗಿಸಲು ಪೊಲೀಸ್‌ ಇಲಾಖೆಗೆ ನೆರವು ನೀಡಿದರು. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ