
ಉಡುಪಿ ಜಿಲ್ಲೆಯ ಬ್ರಹ್ಮಗಿರಿಯಲ್ಲಿ ಮಂಗಳವಾರ (ಫೆ.25) ಮಧ್ಯಾಹ್ನ ನಡೆದ ದುರ್ಘಟನೆಯಲ್ಲಿ 29 ವರ್ಷದ ಯುವಕ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಲೇಖಿರಾಜ್ ಎಂದು ಗುರುತಿಸಲಾಗಿದ್ದು, ಅವರು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ವೈ.ಸುಧೀರ್ ಅವರ ಪುತ್ರರಾಗಿದ್ದಾರೆ.
ಮೃತ ಲೇಖಿರಾಜ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ದೊರಕಿದೆ. ಆದರೆ ಈ ದುರ್ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಉಡುಪಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಸ್ತುತ, ಪ್ರಕರಣ ದಾಖಲಿಸುವ ಕಾರ್ಯ ನಡೆದಿದೆ ಮತ್ತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.