spot_img

ಕೆಥೋಲಿಕ್ ಸಭಾ ಕಾರ್ಕಳ ವಲಯ ಕೇಂದ್ರದ ಸಹಕಾರದಿಂದ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮ

Date:

spot_img

ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಶಾಲಾ ಮಕ್ಕಳಿಗೆ ಕಾರ್ಕಳ ಕೆಥೋಲಿಕ್ ಸಭಾ ವತಿಯಿಂದ ಉಚಿತವಾಗಿ ನೀಡಿದ ಕೊಡೆಗಳ ವಿತರಣಾ ಸಮಾರಂಭವು ಜೂ. 2ರಂದು ನಡೆಯಿತು.

ಸುಮಾರು 140 ಮಕ್ಕಳಿಗೆ ಸಂಘದ ವತಿಯಿಂದ ಉಚಿತವಾಗಿ ಕೊಡೆಗಳನ್ನು ನೀಡಲಾಯಿತು. ಕಾರ್ಕಳ ಕೆಥೋಲಿಕ್ ಸಭಾದ ಅಧ್ಯಕ್ಷ ವಿಲ್ಸನ್ ಮಸ್ಕರೇನ್ಹಸ್ ಮಾತನಾಡಿ ಸಂಘದ ವತಿಯಿಂದ ಮಕ್ಕಳಿಗೆ ಕೊಡೆ ನೀಡುತ್ತಿರುವುದು ಸಂತೋಷವಾಗುತ್ತಿದೆ. ಮಕ್ಕಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳುವಂತೆ ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನಿತರ ಶಾಲೆಗಳಿಗೆ ಸಂಘದ ವತಿಯಿಂದ ಸಹಾಯಹಸ್ತ ಮಾಡುವುದಾಗಿ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ರೂಪಾ ವಹಿಸಿದ್ದರು.ಶಾಲಾ ಮಕ್ಕಳಿಗೆ ಉಚಿತವಾಗಿ ಕೊಡೆಗಳನ್ನು ನೀಡಿದ ಕಾರ್ಕಳ ಕೆಥೋಲಿಕ್ ಸಭಾದ ಅಧ್ಯಕ್ಷರಾದ ವಿಲ್ಸನ್ ಮಸ್ಕರೇನ್ಹಸ್, ಕಾರ್ಯದರ್ಶಿ ಅಂತೋನಿ ಮಿರಾಂದ, ಕೋಶಾಧಿಕಾರಿ ಪ್ರತಿಮಾ ಡಿಸೋಜಾರವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ರಾವ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀ, ಸಿಬ್ಬಂದಿ ಕು| ನಿರೀಕ್ಷಾ, ಕಾರ್ಕಳ ಕೆಥೋಲಿಕ್ ಸಭಾದ ಕಾರ್ಯದರ್ಶಿ ಅಂತೋನಿ ಮಿರಾಂದ, ಕೋಶಾಧಿಕಾರಿ ಪ್ರತಿಮಾ ಡಿಸೋಜಾ, ಮೋಹನ್‌ದಾಸ್ ಹೆಗ್ಡೆ ಜಾರ್ಕಳ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೆಚ್. ಜಿ. ವಸಂತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶ್ರೀಮತಿ ವಸಂತಿ, ಬೈಲೂರು ಗ್ರಾ.ಪಂ. ಸದಸ್ಯೆ ಶ್ರೀಮತಿ ಅಶ್ವಿತಾ, ತುಳುನಾಡ ಜವನೆರ್ ಬೆಂಗಳೂರು ಇದರ ಸದಸ್ಯರಾದ ಪ್ರಸಾದ್ ಶೆಟ್ಟಿ, ಶರತ್ ಶೆಟ್ಟಿ, ಶಾಂತಿ ಯುವಕ ವೃಂದದ ಅಧ್ಯಕ್ಷ ಮುಸ್ತಾಫ್, ಹರೀಶ್ ಆಚಾರ್ಯ ಉಪಸ್ಥಿತರಿದ್ದರು.

ಸಹಶಿಕ್ಷಕರಾದ ದಿನೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಹೆಚ್. ಜಿ. ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಉದಯ ಕುಮಾರ್ ವಂದಿಸಿದರು. ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೆಂಪುಕಲ್ಲು-ಮರಳು ಸಮಸ್ಯೆ: ಕರಾವಳಿ ಬಿಜೆಪಿ ನಿಯೋಗದಿಂದ ಸಿಎಂಗೆ ಮನವಿ ಸಲ್ಲಿಕೆ!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ: ಆರು IAS, ನಾಲ್ಕು IFS, ಓರ್ವ IPS ಅಧಿಕಾರಿಗಳ ವರ್ಗಾವಣೆ!

ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.

ನೇತ್ರಾವತಿ ಸ್ನಾನಘಟ್ಟದ ನಾಲ್ಕನೇ ಸ್ಥಳದಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಭೇಟಿ, ಪರಿಶೀಲನೆ

ಅನಾಮಿಕ ವ್ಯಕ್ತಿ ಗುರುತಿಸಿದ ನಾಲ್ಕನೇ ಸ್ಥಳದಲ್ಲಿನ ಅಗೆಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಎಸ್‌ಐಟಿ (ವಿಶೇಷ ತನಿಖಾ ದಳ) ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ ಅವರು ತನಿಖಾಧಿಕಾರಿಗಳಾದ ಅನುಚೇತ್ ಮತ್ತು ಎಸ್‌ಪಿ ಸಿ.ಎ. ಸೈಮನ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪರಶುರಾಮ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಮುನಿಯಾಲು ಉದಯಕುಮಾರ್ ಶೆಟ್ಟಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಅತ್ಯಂತ ಹಾಸ್ಯಾಸ್ಪದ -‌ ನವೀನ್‌ ನಾಯಕ್

ಪರಶುರಾಮ ಥೀಂ ಪಾರ್ಕ್ ಬಗ್ಗೆ ಇಲ್ಲಸಲ್ಲದ ಅಪಸ್ವರ ಎತ್ತಿ ಯೋಜನೆಯ ಅನುಷ್ಠಾನ ವಿಳಂಬವಾಗುವುದಕ್ಕೆ ಹಾಗೂ ಪ್ರವಾಸೋದ್ಯಮ ಕುಂಟಿತಗೊಳ್ಳುವುದಕ್ಕೆ ಉದಯಕುಮಾರ್ ಶೆಟ್ಟಿಯವರ ರಾಜಕೀಯ ಅವಕಾಶವಾದಿತನವೇ ಕಾರಣವಾಗಿದ್ದು, ಕಾರ್ಕಳದ ಜನತೆ ಈ ದ್ರೋಹವನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ.