
ಕಾರ್ಕಳ : ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಎಸ್. ಕೋಟ್ಯಾನ್ ಅವರು ವಿದ್ಯಾರ್ಥಿಗಳಿಗೆ ಈ ಸಾಮಗ್ರಿಗಳನ್ನು ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಂಬೈ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಣೇಶ ಶೆಟ್ಟಿ ಗೋವಾ, ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ರಮಾನಾಥ ಶೆಣೈ, ಹಿರಿಯರಾದ ಜಯಕೀರ್ತಿ ಕಡಂಬ, ಎಸ್‌ಡಿಎಂಸಿ ಅಧ್ಯಕ್ಷರಾದ ಮದ್ವರಾಜ್, ಚಂದ್ರರಾಜ ಅತಿಕಾರಿ, ಗೋಪಾಲ್ ಪೂಜಾರಿ, ಶೇಖರ್ ಅಂಚನ್, ಮತ್ತು ಬಾಲಕೃಷ್ಣ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಬೆಂಬಲ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.