ಮಗಳ ಸಾವಿನ ದುಃಖ ತಡೆಯಲಾರದೆ ತಾಯಿ ಆತ್ಮಹತ್ಯೆ – ಪೆರ್ಡೂರು ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

Date:

spot_img

ಹಿರಿಯಡ್ಕ : ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದಲ್ಲಿ ಶನಿವಾರ ಮುಂಜಾನೆ ನಡೆದ ದುಃಖದ ಘಟನೆಯೊಂದು ಸ್ಥಳೀಯರನ್ನು ತೀವ್ರ ಆಘಾತಕ್ಕೊಳಗಾಗಿಸಿದೆ. ಮೂರು ತಿಂಗಳ ಹಿಂದೆ ಮೆದುಳಿನ ಆಘಾತದಿಂದ ಮಗಳನ್ನು ಕಳೆದುಕೊಂಡ ಲತಾ (52) ಎಂಬ ತಾಯಿ, ಆ ದುಃಖವನ್ನು ಸಹಿಸಲಾಗದೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲತಾ ಅವರು ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಗಂಡನನ್ನು ಹೃದಯಾಘಾತದಿಂದ ಕಳೆದುಕೊಂಡಿದ್ದರು. , ಏಕೈಕ ಮಗಳ ಸಹಾಯದಿಂದ ಬದುಕನ್ನು ಮುನ್ನಡೆಸುತ್ತಿದ್ದರು. ಆದರೆ ಕಳೆದ ಮೂರು ತಿಂಗಳ ಹಿಂದೆ ಮಗಳು ಮೆದುಳಿನ ಗಂಭೀರ ಸಮಸ್ಯೆಯಿಂದ ಸಾವನ್ನಪ್ಪಿದ ಬಳಿಕ, ಲತಾ ಅವರು ಬಹಳ ಖಿನ್ನತೆಗೊಳಗಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ ಮನೆಯ ಮಲಗುವ ಕೋಣೆಯಲ್ಲಿ ಮರದ ಜಂತಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಲತಾ ಅವರ ಶವ ಪತ್ತೆಯಾಗಿದೆ. ಗ್ರಾಮಸ್ಥರು ತಕ್ಷಣವೇ ಹಿರಿಯಡ್ಕ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.