
ದೊಡ್ಡಬಳ್ಳಾಪುರ: ತಾಯಿ ಸಾವಿನ ಆಘಾತವನ್ನು ಸಹಿಸಲಾರದೆ 24 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ರಕ್ಷಕ್ ಬಾಬು ಎಂಬಾತ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಆದರೆ, ಕೆಲ ತಿಂಗಳ ಹಿಂದೆ ತಾಯಿ ಚಂದ್ರಿಕಾ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಯಿ ಸಾವಿನ ನೋವಿನಿಂದ ಹೊರಬರಲು ಸಾಧ್ಯವಾಗದೇ, ಮಾನಸಿಕವಾಗಿ ನೊಂದಿದ್ದ ರಕ್ಷಕ್ ಇದೀಗ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.