ಸೌದಿಯಲ್ಲಿ ಇರಾನ್ ಕ್ಷಿಪಣಿ ದಾಳಿಗೆ ಉತ್ತರ ಪ್ರದೇಶದ ಯುವಕ ಬಲಿ

Date:

spot_img

ರಿಯಾದ್: ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನೊಬ್ಬ ಇರಾನ್ ನಡೆಸಿದ ಕ್ಷಿಪಣಿ ದಾಳಿಯ ಅವಶೇಷಗಳು ಬಿದ್ದ ಪರಿಣಾಮ ದಾರುಣವಾಗಿ ಮೃತಪಟ್ಟಿದ್ದಾರೆ. ಸೌದಿಯ ರಿಫೈನರಿ ಬಳಿ ಸಂಭವಿಸಿದ ಈ ದುರಂತದಲ್ಲಿ ಯುಪಿ ಮೂಲದ ರವಿ ಗೋಪಾಲ್ (26) ಜೀವ ಕಳೆದುಕೊಂಡಿದ್ದು, ಅವರ ಕುಟುಂಬಕ್ಕೆ ಆಧಾರವಾಗಿದ್ದ ಏಕೈಕ ಕೊಂಡಿ ಕಳಚಿದಂತಾಗಿದೆ.

ಮಾರ್ಚ್ 18ರ ಬುಧವಾರದಂದು ರವಿ ಅವರು ಕೆಲಸ ಮುಗಿಸಿ ರಾತ್ರಿ 8:20ರ ಸುಮಾರಿಗೆ ತಮ್ಮ ಪತ್ನಿ ರಿತು ಅವರೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಸಂಭಾಷಣೆ ನಡೆಯುತ್ತಿದ್ದಾಗಲೇ ಅತ್ತ ಕಡೆಯಿಂದ ಭೀಕರ ಸ್ಫೋಟದ ಸದ್ದು ಕೇಳಿಬಂದಿದ್ದು, ತಕ್ಷಣವೇ ಫೋನ್ ಸಂಪರ್ಕ ಕಡಿತಗೊಂಡಿದೆ. ಸೌದಿ ಅರೇಬಿಯಾ ಹೊಡೆದುರುಳಿಸಿದ ಇರಾನ್‌ನ ನಾಲ್ಕು ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅವಶೇಷಗಳು ರಿಯಾದ್‌ನ ದಕ್ಷಿಣ ಭಾಗದ ರಿಫೈನರಿ ಬಳಿ ಬಿದ್ದಿದ್ದು, ಈ ವೇಳೆ ರವಿ ಅವರ ಮೇಲೆ ಅವಶೇಷಗಳು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 2020ರಲ್ಲಿ ವಿವಾಹವಾಗಿದ್ದ ರವಿ ಅವರಿಗೆ ನಾಲ್ಕು ವರ್ಷದ ಮಗನಿದ್ದು, ವೃದ್ಧ ಪೋಷಕರು ಸೇರಿದಂತೆ ಇಡೀ ಕುಟುಂಬ ಇವರ ದುಡಿಮೆಯನ್ನೇ ನಂಬಿಕೊಂಡಿತ್ತು. ಘಟನೆ ನಡೆದು ಎರಡು ದಿನ ಕಳೆದರೂ ಮೃತದೇಹವನ್ನು ತಾಯ್ನಾಡಿಗೆ ತರಲು ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಮಧ್ಯಪ್ರಾಚ್ಯದ ಸಂಘರ್ಷದಲ್ಲಿ ಇದುವರೆಗೆ ಒಟ್ಟು 6 ಭಾರತೀಯರು ಬಲಿಯಾಗಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.