ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಾಲ್ಕು ಬಾರಿ ಕರೆ ಮಾಡಿದರೂ ಉತ್ತರಿಸದ ಮೋದಿ: ವರದಿ

Date:

spot_img

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್‌ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.

ಜರ್ಮನಿಯ ‘ಫ್ರಾಂಕ್‌ಫರ್ಟರ್‌ ಆಲ್‌ಮೈನ್’ ಪತ್ರಿಕೆಯು ಈ ಬಗ್ಗೆ ವರದಿ ಮಾಡಿದ್ದು, ಪ್ರಧಾನಿ ಮೋದಿಯವರ ಈ ನಿರ್ಧಾರವು ‘ಅವರ ಕೋಪ ಮತ್ತು ಎಚ್ಚರಿಕೆಯ ಹೆಜ್ಜೆಯ’ ಪರಿಣಾಮ ಎಂದು ವಿಶ್ಲೇಷಿಸಿದೆ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುತ್ತಿರುವುದಕ್ಕೆ ಪ್ರತೀಕಾರವಾಗಿ ಅಮೆರಿಕ ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಿದ ನಂತರವೂ ಟ್ರಂಪ್‌ ಅವರು ಕರೆ ಮಾಡಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

ಈ ವರದಿಯ ಪ್ರತಿಯನ್ನು ಬರ್ಲಿನ್ ಮೂಲದ ಗ್ಲೋಬಲ್ ಪಬ್ಲಿಕ್ ಪಾಲಿಸಿ ಇನ್‌ಸ್ಟಿಟ್ಯೂಟ್‌ನ ಸಹ-ಸಂಸ್ಥಾಪಕ ಥಾರ್ಸ್ಟನ್ ಬೆನ್ನರ್ ಅವರು X ನಲ್ಲಿ ಹಂಚಿಕೊಂಡಿದ್ದಾರೆ. ಟ್ರಂಪ್‌ ಅವರು ಸಾಮಾನ್ಯವಾಗಿ ಸುಂಕ ವಿಧಿಸುವ ಮೂಲಕ ಅಮೆರಿಕದ ಮಾರುಕಟ್ಟೆಯ ಮೇಲಿನ ಅವಲಂಬನೆಯನ್ನು ಲಾಭ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ, ಆದರೆ ಮೋದಿ ಇದನ್ನು ವಿರೋಧಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ. ತಮ್ಮ ಮೊದಲ ಅವಧಿಯಲ್ಲಿ ಟ್ರಂಪ್‌ ಅವರೊಂದಿಗೆ ಉತ್ತಮ ಸಹಕಾರದ ಸಂಬಂಧವನ್ನು ಇಟ್ಟುಕೊಂಡಿದ್ದ ಮೋದಿ, ಇದೀಗ ಭಾರತದ ಆರ್ಥಿಕ ಹಿತಾಸಕ್ತಿಗಳ ರಕ್ಷಣೆಗೆ ಕಠಿಣ ನಿಲುವು ತಾಳಿದ್ದಾರೆ ಎಂದು ವರದಿ ಹೇಳಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.