
‘ವಂದೇ ಮಾತರಂ’ ಗೀತೆಗೆ ‘150 ವರ್ಷಗಳ ಸಂಭ್ರಮ’ದ ಹಿನ್ನೆಲೆಯಲ್ಲಿ ಇಂದು ನ.7 ಶುಕ್ರವಾರ ಬೆಳಿಗ್ಗೆ ಗಂಟೆ 10.45ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ‘ವಂದೇ ಮಾತರಂ’ ಸಾಮೂಹಿಕ ಗೀತೆ ಗಾಯನ ಕಾರ್ಯಕ್ರಮವು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.



































