ವಾರಾಣಸಿ ಅತ್ಯಾಚಾರ ಪ್ರಕರಣ: ಪ್ರಧಾನಿ ಮೋದಿಯಿಂದ ಖಡಕ್ ಕ್ರಮಕ್ಕೆ ಸೂಚನೆ

Date:

spot_img

ವಾರಣಾಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದ ಅಮಾನವೀಯ ಅತ್ಯಾಚಾರ ಪ್ರಕರಣ ದೇಶದಾದ್ಯಂತ ಆಕ್ರೋಶ ಮೂಡಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಶುಕ್ರವಾರ ವಾರಾಣಾಸಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ಇತ್ತೀಚೆಗೆ ನಡೆದ ಕ್ರಿಮಿನಲ್ ಘಟನೆಗಳ ಬಗ್ಗೆ ಪರಿಶೀಲನೆ ನಡೆಸಿದ ಸಂದರ್ಭ ಈ ಅತ್ಯಾಚಾರ ಪ್ರಕರಣದ ಕುರಿತಂತೆ ವಾರಾಣಾಸಿ ಪೊಲೀಸ್ ಕಮಿಷನರ್, ವಿಭಾಗೀಯ ಆಯುಕ್ತ ಹಾಗೂ ಜಿಲ್ಲಾಧಿಕಾರಿಗಳಿಂದ ವಿವರವಾದ ಮಾಹಿತಿಯನ್ನು ಪಡೆದುಕೊಂಡರು. ನಂತರ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವೃತವಾಗದಂತೆ ಕಟ್ಟುನಿಟ್ಟಿನ ಕ್ರಮ ಜಾರಿಗೆ ತರಬೇಕು ಎಂದು ಆದೇಶಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 9 ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ ಆರೋಪಿಗಳನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗುವುದು ಎಂಬ ಭರವಸೆಯನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಸಂತ್ರಸ್ತೆ ಲಾಲ್‌ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ಆಕೆಗೆ ಅಮಲು ಪದಾರ್ಥಗಳನ್ನು ನೀಡಿ ಒಟ್ಟೂ 23 ಮಂದಿ ಏಳು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಘಟನೆ ಕ್ರೂರತೆಯ ಅತ್ಯುತ್ತಮ ಉದಾಹರಣೆಯಾಗಿದ್ದು, ಮಹಿಳಾ ಸುರಕ್ಷತೆ ಕುರಿತಾಗಿ ಗಂಭೀರ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.