
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯೋಜನೆಯಿಂದ ಮಾಸಾಶನ ಪಡೆಯುತ್ತಿರುವ ಫಲಾನುಭವಿಗಳ ಮಕ್ಕಳಿಗೆ ವಿದ್ಯಾರ್ಜನೆಗೆ ಪೂರಕವಾಗಿ ಈ ನೆರವು ನೀಡಲಾಯಿತು.
ತಾಲೂಕಿನ ಏಳು ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಕೊಡೆ ಮತ್ತು ಬ್ಯಾಗ್‌ಗಳನ್ನು ವಿತರಿಸಲಾಯಿತು. ಇದರೊಂದಿಗೆ, ಒಬ್ಬ ವಿದ್ಯಾರ್ಥಿಯ ಶಾಲಾ ಶುಲ್ಕ ₹3,250 ಅನ್ನು ಸಹ ಭರಿಸಲಾಯಿತು. ತಾಲೂಕು ಯೋಜನಾಧಿಕಾರಿ ಶ್ರೀ ಸುರೇಂದ್ರ ನಾಯ್ಕ್ ಅವರು ಈ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಪೂರ್ಣಿಮಾ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.