ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧ ಸಾಧ್ಯತೆ: ಕಾಮಗಾರಿಗೆ ವೇಗ ನೀಡಲು (NHAI) ಪ್ರಸ್ತಾಪ

Date:

spot_img

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಜೂನ್ 30ರೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಹೆದ್ದಾರಿ ಪ್ರಾಧಿಕಾರ (NHAI) ಕನಿಷ್ಠ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಗೊಳಿಸುವಂತೆ ಪ್ರಸ್ತಾವನೆ ಸಲ್ಲಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಹಾಸನ ಜಿಲ್ಲಾಡಳಿತ, ಮಾರ್ಚ್ 15ರಿಂದ ಏಪ್ರಿಲ್ ಅಂತ್ಯದವರೆಗೆ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯನ್ನು ಪರಿಗಣಿಸುತ್ತಿದ್ದು, ಅಧಿಕೃತ ಘೋಷಣೆ ಶೀಘ್ರವೇ ಹೊರಬೀಳುವ ನಿರೀಕ್ಷೆಯಿದೆ. ಸಂಸದ ಶ್ರೇಯಸ್ ಪಟೇಲ್ ಗುರುವಾರ ಕಾಮಗಾರಿ ಪರಿಶೀಲನೆ ನಡೆಸಿದ ಸಂದರ್ಭ, ಕಾಮಗಾರಿ ತ್ವರಿತಗೊಳಿಸಲು ಶಿರಾಡಿ ಘಾಟಿಯಲ್ಲಿ ಕನಿಷ್ಠ ಒಂದು ತಿಂಗಳ ಕಾಲ ವಾಹನ ಸಂಚಾರ ನಿರ್ಬಂಧಿಸುವ ಅಗತ್ಯವಿದೆ ಎಂದು (NHAI) ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಒಂದು ಪಥಕ್ಕೆ ಕಾಂಕ್ರೀಟ್ ಹಾಕಿದ ನಂತರ 25 ದಿನಗಳ ಕ್ಯೂರಿಂಗ್ ಅವಶ್ಯಕತೆ ಇದೆ. ಈ ಅವಧಿಯಲ್ಲಿ ವಾಹನ ಸಂಚಾರ ನಿಷೇಧವಿಲ್ಲದೆ ಕಾಮಗಾರಿ ಸಾಧ್ಯವಿಲ್ಲ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ವಿವರಿಸಿದರು.

ಈ ಹಿಂದೆ ಶಿರಾಡಿ ಘಾಟಿಯಲ್ಲಿ ಭೂ ಕುಸಿತ ಸಂಭವಿಸಿದ್ದ ಹಿನ್ನೆಲೆಯಲ್ಲಿ, ಈಗ ರಸ್ತೆ ಜತೆಗೆ ತಡೆಗೋಡೆ ನಿರ್ಮಾಣವೂ ಪ್ರಗತಿಯಲ್ಲಿದೆ. ಸಕಲೇಶಪುರದ ದೋಣಿಗಾಲ್ ಕ್ರಾಸ್‌ನಿಂದ ಮಾರನಹಳ್ಳಿವರೆಗೆ ಒಟ್ಟು 10 ಕಿ.ಮೀ. ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿದ್ದು, ಈಗಾಗಲೇ 4.8 ಕಿ.ಮೀ. ಭಾಗ ಪೂರ್ಣಗೊಂಡಿದೆ.

ವಾಹನ ಸಂಚಾರ ನಿಷೇಧಿಸುವ ದಿನಾಂಕ ಹಾಗೂ ಪರ್ಯಾಯ ಮಾರ್ಗಗಳ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳಲಾಗುವುದು ಎಂದು (NHAI) ಅಧಿಕಾರಿಗಳು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ