
ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ (76) ಇಂದು ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯಪಾತ್ರಗಳಲ್ಲಿ ಮಿಂಚಿದ ಅವರು, ‘ಶ್’, ‘ತರ್ಲೆ ನನ್ಮಗ’, ‘ಪಿತಾಮಹ’ ಸೇರಿದಂತೆ ಅನೇಕ ಚಲನಚಿತ್ರ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದರು.
ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.