
ಉಡುಪಿ: ಶ್ರೀಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯ ಅವರನ್ನು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಗೌರವಿಸಿದರು.
ರಾಜಾ ಎಸ್. ಗಿರಿ ಆಚಾರ್ಯರು ದೇಶದಾದ್ಯಾಂತ ವಿಶಾಲವಾದ ಶ್ರೀ ರಾಘವೇಂದ್ರ ಮಠಗಳ ಆಡಳಿತಾಧಿಕಾರಿಯಾಗಿ ಹಾಗೂ ಗ್ರಂಥ ಸಂಶೋಧಕ, ವಿದ್ವಾಂಸರಿಗೆ ಪೋಷಕರಾಗಿ ನಿರಂತರವಾಗಿ ಅಪರೂಪದ ಸೇವೆ ಸಲ್ಲಿಸುತ್ತಿದ್ದಾರೆ. ಶಾಸ್ತ್ರಗಳ ಸಂರಕ್ಷಣೆಯಲ್ಲಿ, ವಿದ್ವಾನ್ ಪೀಳಿಗೆ ಬೆಳೆಸುವಲ್ಲಿ ಹಾಗೂ ಸಂಶೋಧನೆ ಕ್ಷೇತ್ರದಲ್ಲಿ ಅವರ ಕೊಡುಗೆ ಅತ್ಯಂತ ಅಮೂಲ್ಯವಾಗಿದೆ.
ಅವರ ಈ ಶ್ರೇಷ್ಠ ಸೇವೆಯನ್ನು ಗೌರವಿಸಿ, ಪರ್ಯಾಯ ಶ್ರೀ ಪುತ್ತಿಗೆ ಮಠವು ತಮ್ಮ ಪ್ರತಿಷ್ಠಿತ ಪ್ರಶಸ್ತಿಯ ಮೂಲಕ ಅವರನ್ನು ಸನ್ಮಾನಿಸಿತು.
ಕಾರ್ಯಕ್ರಮದಲ್ಲಿ ಭಾಗಿಯಾದವರು:
ಈ ಸಮಾರಂಭದಲ್ಲಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೂ ಉಪಸ್ಥಿತರಿದ್ದರು.