
ಕಾಶ್ಮೀರ: ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಪರಿಚ್ಛೇದದಡಿಯಲ್ಲಿ ಸೇರಿಸುವಂತೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಬುಧವಾರ ಹಿಂಸಾಚಾರಕ್ಕೆ ತಿರುಗಿದೆ. ಲೇಹ್‌ನಲ್ಲಿ ನಡೆದ ಈ ಘರ್ಷಣೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಲೇಹ್ ಅಪೆಕ್ಸ್ ಬಾಡಿ ಪ್ರಾಯೋಜಿತ ಬಂದ್ ಸಂದರ್ಭದಲ್ಲಿ ನೂರಾರು ಪ್ರತಿಭಟನಾಕಾರರು ಬೀದಿಗಿಳಿದು, ಲೇಹ್‌ನಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೆ, ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಮತ್ತು ಲಾಠಿ ಪ್ರಹಾರ ನಡೆಸಿದರೂ, ಹಿಂಸಾಚಾರ ಹೆಚ್ಚಿದ ಕಾರಣ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಪ್ರತಿಭಟನಾಕಾರರ ಪ್ರಕಾರ, ಪೊಲೀಸರ ಗುಂಡಿನ ದಾಳಿಯಿಂದಲೇ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯಿಂದ ಲೇಹ್‌ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.



































