ವಿಕಸಿತ ಭಾರತ ನಿರ್ಮಾಣಕ್ಕೆ ವಿವೇಕಾನಂದರ ಚಿಂತನೆಗಳೇ ಸ್ಫೂರ್ತಿ: ರಮಿತಾ ಸೂರ್ಯವಂಶಿ

Date:

spot_img

ಪುತ್ತೂರು : “ಭಾರತ ದೇಶ ಯಾವಾಗಲೂ ತಾರುಣ್ಯ ರಾಷ್ಟ್ರವಾಗಿರಬೇಕೆಂಬುದು ಸ್ವಾಮಿ ವಿವೇಕಾನಂದರ ಕನಸಾಗಿತ್ತು. ನಾವು ಇಡುವ ಹೆಜ್ಜೆ ಹೇಗಿರಬೇಕೆಂದರೆ ಹಿಂದೆತಿರುಗಿ ನೋಡಿದರೂ ಕಾಣುವಂತೆ, ಮರಳುಗಾಡಿನಲ್ಲಿ ನಡೆದರೂ ಹೆಜ್ಜೆಗುರುತು ಗೋಚರಿಸುವಂತಿರಬೇಕು. ಪ್ರತಿಯೊಬ್ಬ ಭಾರತೀಯ ಪ್ರಜೆಯೂ ವಿದ್ಯಾವಂತನಾಗಬೇಕು. ವಿವೇಕಾನಂದರ ನೈತಿಕತೆಯನ್ನು ಬೆಳೆಸಿಕೊಂಡು ಉನ್ನತ ಮಟ್ಟದ ಗುರಿಯನ್ನು ಹೊಂದಿ ದೇಶವನ್ನೇ ಬೆಳಗುವಂತಾಗಬೇಕು” ಎಂದು ಕಾರ್ಕಳದ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾದ ರಮಿತಾ ಸೂರ್ಯವಂಶಿ ಹೇಳಿದರು.

ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾಕೇಂದ್ರ ಮತ್ತು ಐಕ್ಯೂಎಸಿ ಹಾಗೂ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಇದರ ಸಹಯೋಗದಲ್ಲಿ ನಡೆದ 25ನೇ ಸಂಚಿಕೆಯ ವಿವೇಕ ಸ್ಮೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.

“ವಿವೇಕಾನಂದರು ಬಹು ಹಸನ್ಮುಖಿ ವ್ಯಕ್ತಿ. ನಮ್ಮಿಂದ ಯಾವುದೂ ಸಾಧ್ಯವಿಲ್ಲ ಎಂದುಕೊಂಡಾಗ ಸ್ವಾಮಿ ವಿವೇಕಾನಂದರ ಭಾವಚಿತ್ರವನ್ನು ನೋಡಿ ಅವರ ವ್ಯಕ್ತಿತ್ವವನ್ನು ಜ್ಞಾಪಿಸಿಕೊಂಡರೆ ನಾನು ಎಲ್ಲವನ್ನೂ ಸಾಧಿಸಬಲ್ಲೆ ಎಂಬ ಆತ್ಮಸ್ಥೈರ್ಯ ಮೂಡುತ್ತದೆ. ಅವರ ಚಿಂತನೆಗಳು ಇಂದಿಗೂ ಜೀವಂತವಾಗಿವೆ. ಇಂದು ರಾಷ್ಟ್ರದಲ್ಲಿ ನಡೆಯುವ ಅನೇಕ ಪ್ರಗತಿಪರ ಕಾರ್ಯಗಳಿಗೆ ಸ್ವಾಮೀಜಿಯವರೇ ಸ್ಫೂರ್ತಿ. ನಾವಿಂದು ವಿಶ್ವಕ್ಕೆ ಐದನೇ ಶ್ರೀಮಂತ ರಾಷ್ಟವಾದ ನವಭಾರತ ಪರ್ವದಲ್ಲಿ ಜೀವಿಸುತ್ತಿದ್ದೇವೆ. ಇಂದಿನ ಯುವಕರೆಲ್ಲರೂ ಬಲಿಷ್ಠರು, ವಿದ್ಯಾವಂತರು, ಉತ್ತಮ ಆಲೋಚನೆ ಹಾಗೂ ಉನ್ನತ ವ್ಯಕ್ತಿತ್ವ ಹೊಂದಿದ ಭಾರತದ ಪ್ರಜೆಗಳಾಗಬೇಕು” ಎಂದು ನುಡಿದರು.

ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ರವಿ ನಾರಾಯಣ ಎಮ್‍ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, “ಇತ್ತೀಚಿನ ದಿನಗಳಲ್ಲಿ ವಿಕಸಿತ ಹಾಗೂ ಆತ್ಮನಿರ್ಭರ ಭಾರತ ಎಂಬ ಎರಡು ಶಬ್ದಗಳನ್ನು ನಾವು ಪದೇ ಪದೇ ಕೇಳುತ್ತಿದ್ದೇವೆ. ವಿವೇಕಾನಂದರೇ ಇದಕ್ಕೆ ಪ್ರೇರಣೆ ಎಂದರೆ ತಪ್ಪಾಗಲಾರದು. ಸ್ವಾಮಿ ವಿವೇಕಾನಂದರು ಪರಕೀಯರ ಆಳ್ವಿಕೆಯಲ್ಲಿದ್ದಾಗಲೇ ಭಾರತೀಯರ ಇರುವಿಕೆಯನ್ನುಇಡೀ ಪ್ರಪಂಚದೆದುರು ತೆರೆದಿಟ್ಟವರು. ನಾವು ಆಧ್ಯಾತ್ಮ ಭಾರತದ ಚಿಂತನೆಯನ್ನು ಪೂರಕವಾಗಿರಿಸಿಕೊಂಡು ಭವಿಷ್ಯದ ಹೆಜ್ಜೆಯನ್ನಿಟ್ಟರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ. ಪ್ರತಿಯೊಬ್ಬರೂ ವಿಕಸಿತ ಭಾರತದ ಚಿಂತನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸೋಣ” ಎಂದರು.

ವೇದಿಕೆಯಲ್ಲಿ ಸಂಸ್ಥೆಯ ಹಿರಿಯ ಪ್ರಾಧ್ಯಾಪಕ ರಾಧಾಕೃಷ್ಣ ರೈ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿವೇಕಾನಂದ ಸಂಶೋಧನಾ ಕೇಂದ್ರ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ಸ್ನಾತಕೋತ್ತರ ವಿಭಾಗದ ಡೀನ್‍ ಡಾ. ವಿಜಯ ಸರಸ್ವತಿ ಸ್ವಾಗತಿಸಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಕವಿತಾ ಕೆ ಜಿ ವಂದಿಸಿದರು. ಸ್ನಾತಕೋತ್ತರ ಎಂಕಾಂ ವಿಭಾಗದ ವಿದ್ಯಾರ್ಥಿ ನವೀನ್‍ಕೃಷ್ಣ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ