
ತನ್ನ ಕನಸಿನ ಗೆಳತಿಗೆ ಜಲಪಾತದ ತುದಿಯಲ್ಲಿ ನಿಂತು ಪ್ರಪೋಸ್ ಮಾಡಲು ಪ್ರಯತ್ನಿಸುತ್ತಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಈ ಮನ ಮಿಡಿಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ವೈರಲ್ ಆದ ವಿಡಿಯೋದಲ್ಲಿ, ಒಬ್ಬ ಯುವಕ ತನ್ನ ಗೆಳತಿಗೆ ಪ್ರಪೋಸ್ ಮಾಡಲು ಜಲಪಾತದ ಮಧ್ಯದಲ್ಲಿರುವ ಬಂಡೆಗಳ ಮೇಲೆ ನಿಂತಿರುವುದನ್ನು ನೋಡಬಹುದು. ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿದ್ದ ಹುಡುಗಿಗೆ ಪ್ರಪೋಸ್ ಮಾಡಲು ಆತ ಮೊಣಕಾಲುಗಳ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸುತ್ತಾನೆ.
ಆದರೆ ಅಲ್ಲಿ ವಿಧಿಯಾಟವೇ ಬೇರೆ ಇತ್ತು. ಇದ್ದಕ್ಕಿದ್ದಂತೆ ಅವನ ಕಾಲು ಜಾರಿ, ವೇಗವಾಗಿ ಹರಿಯುವ ಜಲಪಾತಕ್ಕೆ ಬಿದ್ದು ಕೊಚ್ಚಿ ಹೋಗುತ್ತಾನೆ. ಹತ್ತಿರದಲ್ಲೇ ನಿಂತಿದ್ದ ಅವನ ಗೆಳತಿ ಅವನನ್ನು ಉಳಿಸಲು ಪ್ರಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಆತ ವೇಗದ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುವುದನ್ನು ಗೆಳತಿ ಏನು ಮಾಡಲು ಸಾಧ್ಯವಾಗದೇ ಮೌನವಾಗಿ ನೋಡುತ್ತಲೇ ಇದ್ದಳು ಎಂದು ವಿಡಿಯೋದಲ್ಲಿ ಕಾಣಬಹುದು.
ಈ ವಿಡಿಯೋವನ್ನು @MarchUnofficial ಎಂಬ ಇನ್‌ಸ್ಟಾಗ್ರಾಮ್ ಖಾತೆಯು ಹಂಚಿಕೊಂಡಿದೆ. ಸಾವಿರಾರು ಜನರು ಇದನ್ನು ವೀಕ್ಷಿಸಿದ್ದು, ವಿಭಿನ್ನ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.