ಧರ್ಮಸ್ಥಳ ಹೆಸರು ಹಾಳಾಗಲು ಬಿಡಲ್ಲ, ಹೆಗ್ಗಡೆಯವರ ಜೊತೆ ನಾವಿದ್ದೇವೆ: ಜನಾರ್ದನ ಪೂಜಾರಿ

Date:

spot_img

ಉಳ್ಳಾಲ: ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಡೆದ ಮುದ್ದುಕೃಷ್ಣ ಸಮಾರಂಭದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಕಣ್ಣೀರಿಡುತ್ತ ಆತಂಕ ವ್ಯಕ್ತಪಡಿಸಿದರು.

“ಮಸೀದಿ ಮತ್ತು ಚರ್ಚ್‌ಗಳಲ್ಲಿ ಶವಗಳನ್ನು ಹೂತುಹಾಕಿಲ್ಲವೇ? ಕೇವಲ ಧರ್ಮಸ್ಥಳದಲ್ಲಿ ಮಾತ್ರವೇ ಇಂತಹದ್ದು ನಡೆಯುತ್ತಿದೆಯೇ?” ಎಂದು ಪ್ರಶ್ನಿಸಿದ ಪೂಜಾರಿ, ಈ ಆರೋಪಗಳು ಧರ್ಮಸ್ಥಳದ ಹೆಸರನ್ನು ಹಾಳು ಮಾಡುತ್ತಿವೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.

“ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜೊತೆ ಇಡೀ ಜಗತ್ತು ನಿಲ್ಲುತ್ತದೆ. ಇಡೀ ಕುದ್ರೋಳಿ ದೇವಸ್ಥಾನ ನಿಮ್ಮೊಂದಿಗಿದೆ, ಹೆದರಬೇಡಿ. ಧರ್ಮಸ್ಥಳದಂತಹ ದೇವಸ್ಥಾನವನ್ನು ನಡೆಸುವ ಕಷ್ಟ ನನಗೆ ಗೊತ್ತು. ವೀರೇಂದ್ರ ಹೆಗ್ಗಡೆಯವರೇ, ನಾನು ನಿಮ್ಮ ಜೊತೆಗಿದ್ದೇನೆ. ಎಸ್‌ಐಟಿ ಎಷ್ಟು ಅಗೆದರೂ ಅಲ್ಲಿ ಏನೂ ಸಿಗುವುದಿಲ್ಲ” ಎಂದು ಪೂಜಾರಿ ಟೀಕಿಸಿದರು.

“ಧರ್ಮಸ್ಥಳ ಕೇವಲ ಜೈನರಿಗೆ ಸೇರಿದ ಸ್ಥಳವಲ್ಲ, ಅದನ್ನು ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ನಾನು ಕುದ್ರೋಳಿ ದೇವಸ್ಥಾನದ ಭಕ್ತನಷ್ಟೇ ಅಲ್ಲ, ಧರ್ಮಸ್ಥಳದ ಭಕ್ತನೂ ಹೌದು. ಧರ್ಮಸ್ಥಳದ ಹೆಸರು ಹಾಳು ಮಾಡಲು ಪೂಜಾರಿ ಬಿಡುವುದಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಉದ್ದೇಶಿಸಿ ಮಾತನಾಡಿದ ಪೂಜಾರಿ, “ಮೋದಿಯವರೇ, ನಿಮಗೆ ಧೈರ್ಯವಿದ್ದರೆ, ತಾಕತ್ತಿದ್ದರೆ ಧರ್ಮಸ್ಥಳಕ್ಕೆ ಹೋಗಿ ಭಾಷಣ ಮಾಡಿ” ಎಂದು ಸವಾಲು ಹಾಕಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ