“ನಮ್ಮ ಸಂಸ್ಕೃತಿಗೆ ಹಾನಿಯಾಗಲು ಬಿಡಲ್ಲ”ಯಕ್ಷಗಾನದ ಉಳಿವು ಕುರಿತು ಡಿಕೆಶಿಯ ಭರವಸೆ

Date:

spot_img

ಬೆಂಗಳೂರು: ಕರ್ನಾಟಕದ ಗಂಡು ಕಲೆ ಎಂದೇ ಖ್ಯಾತಿಯ ಪಡೆದಿರುವ ಯಕ್ಷಗಾನ ಇದೀಗ ಹಲವು ವಿಘ್ನಗಳನ್ನು ಎದುರಿಸುತ್ತಿದೆ. ಕೆಲ ವರ್ಷಗಳ ಹಿಂದೆ ರಾತ್ರಿ ಬೆಳಗಾಗುವ ತನಕ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನಗಳಿಗೆ ಈಗ ಧ್ವನಿವರ್ಧಕ ನಿಯಮದ ಅನ್ವಯ ಮಧ್ಯರಾತ್ರಿಯಲ್ಲೇ ಬ್ರೇಕ್ ಬೀಳುತ್ತಿದೆ. ಈ ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಯಾದ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್ ಯಕ್ಷಗಾನ ಪ್ರೇಮಿಗಳಿಗೆ ಭರವಸೆ ನೀಡಿದ್ದಾರೆ.

ಯಕ್ಷಗಾನದ ಪರ ಮಾತನಾಡಿದ ಶಾಸಕ
ವಿಧಾನಸಭೆಯ ಗಮನ ಸೆಳೆಯುತ್ತ, ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಧ್ವನಿವರ್ಧಕ ನಿಯಮದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಕ್ಷಗಾನಕ್ಕೆ ತೊಂದರೆ ಉಂಟಾಗಿದೆ ಎಂದು ಪ್ರಶ್ನೆ ಎತ್ತಿದರು. ಈ ನಿಯಮಗಳನ್ನು ಸರ್ಕಾರ ಮರುಪರಿಶೀಲಿಸಿ ಯಕ್ಷಗಾನ ಪ್ರದರ್ಶನಕ್ಕೆ ಅನುಕೂಲ ಮಾಡುವಂತೆ ಅವರು ಮನವಿ ಮಾಡಿದರು.

ಡಿಕೆಶಿಯ ಭರವಸೆ
ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಯಕ್ಷಗಾನ ಪ್ರದರ್ಶನಕ್ಕೆ ಪೂರ್ವಾನುಮತಿ ಪಡೆಯಲು ತೊಂದರೆ ಆಗುತ್ತಿದೆ ಎಂಬ ಬಗ್ಗೆ ನಾವು ಗಮನ ಹರಿಸಿದ್ದೇವೆ. ಯಕ್ಷಗಾನ ಮಾಡುವವರೆಲ್ಲಾ ತಕ್ಷಣ ಅರ್ಜಿ ಹಾಕಿ ನೆನೆಗುದಿಗೆ ಬಾರದಂತೆ 15 ದಿನಗಳ ತಯಾರಿ ನಡೆಸುತ್ತಾರೆ. ಯಕ್ಷಗಾನ ಬೆಳಗಿನ ಜಾವದವರೆಗೂ ನಡೆಯಲು ತಡೆಯಿಲ್ಲ. ಈ ನಿಯಮಗಳು ಬಿಜೆಪಿಯ ಆಡಳಿತಾವಧಿಯಲ್ಲಿಯೂ ರೂಪಗೊಂಡಿದ್ದವು. ಆದರೆ, ನಾವು ಈಗ ಈ ನಿರ್ಬಂಧಗಳನ್ನು ಪರಿಶೀಲಿಸುತ್ತೇವೆ. ಯಕ್ಷಗಾನ ಮತ್ತು ಬಯಲಾಟ ದೇಶದ ಆಸ್ತಿಗಳು, ನಮ್ಮ ಸಂಸ್ಕೃತಿಯ ಸಮೃದ್ಧಿಯ ಭಾಗ. ಇದಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡುತ್ತದೆ” ಎಂದು ಭರವಸೆ ನೀಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ