ವಿವಾಹ ವಾರ್ಷಿಕೋತ್ಸವದ ಫೋಟೋ ವೈರಲ್: ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ವದಂತಿಗಳಿಗೆ ತೆರೆ

Date:

spot_img

ಮುಂಬಯಿ, ಏ.21: ಬಾಲಿವುಡ್‌ನ ತಾರಾ ದಂಪತಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ದಾಂಪತ್ಯ ಸಂಬಂಧದಲ್ಲಿ ಬಿರುಕು ಎನ್ನುವ ವದಂತಿಗಳಿಗೆ ತೆರೆ ಬಿದ್ದಂತಾಗಿದೆ. ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ದಿನ, ಐಶ್ವರ್ಯಾ ಅವರು ಪತಿ ಅಭಿಷೇಕ್ ಮತ್ತು ಮಗಳು ಆರಾಧ್ಯ ಜತೆಗಿನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ಅಭಿಷೇಕ್ ಮತ್ತು ಐಶ್ವರ್ಯಾ ಬಚ್ಚನ್ ದಂಪತಿ ಮಗಳ ಜತೆ ವೇದಿಕೆಯಲ್ಲಿ ನೃತ್ಯಮಾಡಿದ ವಿಡಿಯೋವೊಂದು ವೈರಲ್ ಆಗಿತ್ತು. ಇದರೊಂದಿಗೆ ಇದೀಗ ಕುಟುಂಬದ ಫೋಟೋ ಕೂಡ ವೈರಲ್ ಆಗಿದ್ದು, ಸುಮ್ಮಸುಮ್ಮನೆ ಹರಡಿದ ವಿಚ್ಛೇದನದ ವದಂತಿಗಳಿಗೆ ಸ್ಪಷ್ಟ ಉತ್ತರ ನೀಡಿದಂತಾಗಿದೆ.

ಇದಕ್ಕೂ ಮೊದಲು, ಅಂಬಾನಿ ಪುತ್ರ ಅನಂತ್ ಮತ್ತು ರಾಧಿಕಾ ಮದುವೆ ಕಾರ್ಯಕ್ರಮದಲ್ಲಿ ಬಚ್ಚನ್ ಕುಟುಂಬ ಜತೆ ಐಶ್ವರ್ಯಾ ಹಾಗೂ ಆರಾಧ್ಯ ಪ್ರತ್ಯೇಕವಾಗಿ ಕಾಣಿಸಿಕೊಂಡಿದ್ದರು. ಇದರಿಂದಾಗಿ ಅವರ ದಾಂಪತ್ಯದಲ್ಲಿ ಬಿರುಕು ಎನ್ನುವ ಊಹಾಪೋಹಗಳು ಮತ್ತಷ್ಟು ಗಂಭೀರವಾಗಿದ್ದವು. ಅಭಿಷೇಕ್ ವಿರುದ್ಧ ನಟಿ ನಿಂಮ್ರತ್ ಕೌರ್ ಜತೆ ಸಂಬಂಧವಿದೆ ಎಂಬ ಟೀಕೆಗಳೂ ಕೇಳಿಬಂದಿದ್ದವು.

ಆದರೆ ಇದೀಗ ಶೇರ್ ಮಾಡಲಾದ ಕುಟುಂಬ ಫೋಟೋದಿಂದ ಈ ಎಲ್ಲಾ ವದಂತಿಗಳಿಗೆ ತೆರೆ ಎಳೆದಂತಾಗಿದೆ. “ಈ ಫೋಟೋ ಎಲ್ಲಾ ವದಂತಿಗಳಿಗೆ ಕಪಾಳಕ್ಕೆ ಹೊಡೆದಂತಿದೆ” ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮುಡಾರು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

ಮುಡಾರು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಜಾಲಿ ಬಾಯ್ಸ್ ಬಜಗೋಳಿ ತಂಡದಿಂದ ಉಚಿತ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿ ವಿತರಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನ

ಜೂನ್ 26 ರ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ವಿರೋಧಿ ದಿನದ ಮಹತ್ವ, ಉದ್ದೇಶ ಮತ್ತು ಮಾದಕ ಮುಕ್ತ ಸಮಾಜದ ನಿರ್ಮಾಣದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ಮೇಲಿನ ದಾಳಿ: ಮಟ್ಟಾರ್ ಹೆಗ್ಡೆ

1975 ರ ತುರ್ತು ಪರಿಸ್ಥಿತಿಯು ಭಾರತದ ಪ್ರಜಾಪ್ರಭುತ್ವದ ಮೇಲಿನ ಕರಾಳ ದಾಳಿ ಎಂದು ಉಡುಪಿಯಲ್ಲಿ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರೇಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ

ಹಿರಿಯಡ್ಕದ ಹಿರೇಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಗರ್ಭಗೃಹ ನಿರ್ಮಾಣಕ್ಕೆ ನ್ಯಾಯಾಧೀಶ ಪುರುಷೋತ್ತಮ್ ಚಾಲನೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.