
ಬೆಂಗಳೂರು: ನಟ ದರ್ಶನ್ ಮತ್ತು ಸಹ ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಬೆನ್ನಲ್ಲೇ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (ದಿವ್ಯಾ ಸ್ಪಂದನಾ) ಇನ್‌ಸ್ಟಾಗ್ರಾಮ್‌ನಲ್ಲಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ.
ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿ, “ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಬಲವಾದ ಸಂದೇಶವನ್ನು ಈ ತೀರ್ಪು ರವಾನಿಸುತ್ತದೆ” ಎಂದು ಅವರು ಹೇಳಿದ್ದಾರೆ. ಜೊತೆಗೆ, ಸಾರ್ವಜನಿಕರಿಗೆ ಒಂದು ಸಂದೇಶ ನೀಡಿದ್ದಾರೆ. “ಸರಿಯಾದ ಕಾನೂನು ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಡಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಖಂಡಿತ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ವಿವೇಚನೆಗೆ ನಿಷ್ಠರಾಗಿರಿ” ಎಂದು ರಮ್ಯಾ ಬರೆದುಕೊಂಡಿದ್ದಾರೆ.