ಬೈಲೂರು ಪರಶುರಾಮ ಥೀಮ್ ಪಾರ್ಕ್ ಸ್ಥಗಿತಗೊಂಡ ಕಾಮಗಾರಿ ಯಾವಾಗ ? : ಸುಮಿತ್ ಶೆಟ್ಟಿ ಕೌಡೂರು

Date:

spot_img

ಕಾರ್ಕಳ: ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮತ್ತು ಅವರ ತಂಡವು ಸುಳ್ಳು ಸುದ್ದಿ ಮತ್ತು ಅಪಪ್ರಚಾರದ ಮೂಲಕ ಈ ಯೋಜನೆಯನ್ನು ವಿವಾದಕ್ಕೀಡುಮಾಡಿ, ಕಾಮಗಾರಿಯನ್ನು ಹಾಳುಗೆಡವಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಕಾಂಗ್ರೆಸ್‌ನ ಆರೋಪಗಳು ಸುಳ್ಳೆಂದು ಈಗ ಸಾಬೀತಾಗಿವೆ. ಪ್ರವಾಸೋದ್ಯಮ ದೃಷ್ಟಿಯಿಂದ ಮಹತ್ವದ ಈ ಯೋಜನೆಯ ಕಾಮಗಾರಿಯನ್ನು ಯಾವಾಗ ಪುನರಾರಂಭಿಸುತ್ತೀರಿ?” ಎಂದು ಸುಮಿತ್ ಶೆಟ್ಟಿ ಪ್ರಶ್ನಿಸಿದ್ದಾರೆ. “ನಮ್ಮದೇ ಸರ್ಕಾರ ಇದೆ ಎಂಬ ಕಾರಣಕ್ಕೆ ಹಣ ಬಿಡುಗಡೆ ಮಾಡದೆ, ಉತ್ತಮ ದೂರದೃಷ್ಟಿಯ ಯೋಜನೆಯ ಕಾಮಗಾರಿ ಮುಂದುವರೆಯಲು ಕಾಂಗ್ರೆಸ್ ಅಡ್ಡಿಪಡಿಸಿದೆ. ಖಾಸಗಿ ದೂರಿನ ಆಧಾರದ ಮೇಲೆ ಸರ್ಕಾರಿ ಕಾಮಗಾರಿಯನ್ನು ನಿಲ್ಲಿಸಿದ ಕೀರ್ತಿ ಉದಯ ಶೆಟ್ಟಿ ಮತ್ತು ತಂಡಕ್ಕೆ ಸಲ್ಲುತ್ತದೆ” ಎಂದು ಅವರು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್‌ಗೆ ಥೀಮ್ ಪಾರ್ಕ್ ಬೇಡವಾದರೂ, ಬೈಲೂರು ಮತ್ತು ಕ್ಷೇತ್ರದ ಜನತೆಗೆ ಇದು ಬೇಕಾಗಿದೆ. ಪ್ರತಿಮೆ ಫೈಬರ್ ಎಂದು ಅಪಪ್ರಚಾರ ನಡೆಸಿ, ಕಾರ್ಕಳದ ಮಾನವನ್ನು ವಿಶ್ವಮಟ್ಟದಲ್ಲಿ ಹರಾಜು ಹಾಕಿದ ಕಾಂಗ್ರೆಸ್ಸಿಗರು, ಅದು ಫೈಬರ್ ಅಲ್ಲ ಎಂದು ಸಾಬೀತಾದ ಮೇಲೆ ಕ್ಷಮೆ ಕೇಳಬೇಕಿತ್ತು” ಎಂದು ಸುಮಿತ್ ಶೆಟ್ಟಿ ಆಗ್ರಹಿಸಿದ್ದಾರೆ. ಸರ್ಕಾರ ಅಧಿಕಾರವನ್ನು ಸ್ವಾರ್ಥ ಸಾಧನೆಗೆ ಬಳಸಿಕೊಂಡಿದೆ ಎಂದು ಆರೋಪಿಸಿದ ಅವರು, “ಕಾಮಗಾರಿಯು ಮೂಲ ಒಪ್ಪಂದದಂತೆ ನಡೆದಿದೆಯೇ ಎಂದು ಖಚಿತಪಡಿಸಿಕೊಳ್ಳದೆ, ಇಲಾಖೆಗೆ ಹಸ್ತಾಂತರವಾಗುವ ಮೊದಲೇ ಕಾಂಗ್ರೆಸ್ಸಿಗರು ವಿವಾದ ಸೃಷ್ಟಿಸಿದ್ದರು. ಇದೀಗ ಅವರ ಅಪಪ್ರಚಾರ ಸುಳ್ಳೆಂದು ಸಾಬೀತಾಗಿದೆ. ತನಿಖೆ ಮುಂದುವರಿಯಲಿ, ನಮಗೇನು ಆಕ್ಷೇಪವಿಲ್ಲ. ಆದರೆ, ಕಾಮಗಾರಿ ಯಾವಾಗ ಆರಂಭವಾಗುತ್ತದೆ ಮತ್ತು ಪಾರ್ಕ್ ಅನ್ನು ಯಾವಾಗ ಸಾರ್ವಜನಿಕ ವೀಕ್ಷಣೆಗೆ ಬಿಟ್ಟುಕೊಡುತ್ತೀರಿ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.