ಮಹಾಕುಂಭಮೇಳದಲ್ಲಿ ಮೃತರ ಅಂಕಿಅಂಶಗಳು ಇನ್ನೂ ಹೊರಬಂದಿಲ್ಲ ಏಕೆ ? ಅಖಿಲೇಶ್ ಯಾದವ್

Date:

spot_img

ನವದೆಹಲಿ: ಮಹಾಕುಂಭಮೇಳದಲ್ಲಿ ಸರಕಾರದ ದುರಾಡಳಿತ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಲೋಕಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದರು.

“ಡಿಜಿಟಲೀಕರಣದ ಬಗ್ಗೆ ಹಿಗ್ಗಿ ಮಾತಾಡಿದ ಸರಕಾರ, ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರ ಅಂತಿಮ ಸಂಖ್ಯೆಗಳನ್ನೂ ನೀಡಲು ವಿಫಲವಾಗಿದೆ. 300 ಕಿಮೀ ಉದ್ದದ ಟ್ರಾಫಿಕ್ ಜಾಮ್‌ನಲ್ಲಿ ಭಕ್ತರು ಸಿಲುಕಿಕೊಂಡಿದ್ದಾರೆ, ಗಡಿಗಳನ್ನು ಮುಚ್ಚಲಾಗಿದೆ. ಇದು ‘ವಿಕಸಿತ್ ಭಾರತ’ದ ಚಿತ್ರಣವೇ?” ಎಂದು ಅವರು ಪ್ರಶ್ನಿಸಿದರು.

ಅಖಿಲೇಶ್ ಯಾದವ್ ಮತ್ತಷ್ಟು ಆಕ್ರೋಶ ವ್ಯಕ್ತಪಡಿಸುತ್ತಾ,”ಡಬಲ್ ಇಂಜಿನ್ ಸರಕಾರ,ಡಬಲ್ ಪ್ರಮಾದ ಮಾಡುತ್ತಿದೆ. ಭೂಮಿಯ ಮೇಲಿನ ಸಮಸ್ಯೆಗಳನ್ನು ಪರಿಹರಿಸಲು ನಮಗೆ ಸಾಧ್ಯವಾಗದಿದ್ದರೆ, ಚಂದ್ರನಲ್ಲಿಗೆ ಹೋಗಿ ಏನು ಮಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.

“ಡ್ರೋನ್ ಗಳು ಎಲ್ಲಿವೆ? ಸರ್ಕಾರ ಡಿಜಿಟಲೀಕರಣದ ಬಗ್ಗೆ ಜಾಹೀರಾತು ನೀಡಿದೆ, ಆದರೆ ಮಹಾಕುಂಭಮೇಳದಲ್ಲಿ ನಾಪತ್ತೆಯಾಗಿರುವ ಅಥವಾ ಸಾವನ್ನಪ್ಪಿದವರ ಅಂಕಿಅಂಶಗಳನ್ನು ನೀಡಲು ಇನ್ನೂ ಸಾಧ್ಯವಾಗಿಲ್ಲ” ಎಂದು ಅವರು ಗಂಭೀರ ಆರೋಪ ಮಾಡಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.