
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಪತ್ನಿ ಪರಾರಿಯಾದ ನೋವಿಗೆ ತಾಳಲಾರದೆ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕೆಲ ದಿನಗಳ ಹಿಂದೆ, ಅದೇ ಗ್ರಾಮದ ಪ್ರದೀಪ್ ಎಂಬಾತನೊಂದಿಗೆ ಪತ್ನಿ ಮಗುವಿನೊಂದಿಗೆ ಪರಾರಿಯಾಗಿದ್ದರು. ಹಲವೆಡೆ ಹುಡುಕಾಟ ನಡೆಸಿದರೂ ಪತ್ತೆಯಾಗದೆ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರೂ ಸ್ಪಂದನೆ ಸಿಗಲಿಲ್ಲ. ನಂತರ ಎಸ್.ಪಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ, ಮನನೊಂದು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶೋಧ ಕಾರ್ಯ ಮುಂದುವರಿಯುತ್ತಿದೆ ಎಂದು ವರದಿಯಾಗಿದೆ.