‘ಫೋಟೋ ತೆಗೆಯುತ್ತೇನೆ’ ಎಂದು ಹೇಳಿ ಪತಿಯನ್ನು ಸೇತುವೆಯಿಂದ ನದಿಗೆ ತಳ್ಳಿದ ಪತ್ನಿ!

Date:

spot_img

ರಾಯಚೂರು: ರಾಯಚೂರು ಜಿಲ್ಲೆಯ ಗುರ್ಜಾಪುರ ಸೇತುವೆ ಕಂ ಬ್ಯಾರೇಜ್ ಬಳಿ, ಪತ್ನಿಯೊಬ್ಬಳು ತನ್ನ ಪತಿಯನ್ನು ನದಿಗೆ ತಳ್ಳಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.

ದಂಪತಿಗಳು ಬೈಕ್‌ನಲ್ಲಿ ಸೇತುವೆಯ ಮೇಲೆ ಬಂದಿದ್ದು, ಫೋಟೋ ತೆಗೆಸಿಕೊಳ್ಳುವ ನೆಪದಲ್ಲಿ ಪತ್ನಿ ಮೊದಲು ತಾನೇ ನಿಂತು ಫೋಟೋ ತೆಗೆಸಿಕೊಂಡಿದ್ದಾಳೆ. ನಂತರ ಪತಿಯನ್ನು ಸೇತುವೆಯ ತುದಿಗೆ ನಿಲ್ಲಿಸಿ, “ಫೋಟೋ ತೆಗೆಯುತ್ತೇನೆ” ಎಂದು ಹೇಳಿ ಆತನನ್ನು ನದಿಗೆ ತಳ್ಳಿದ್ದಾಳೆ.

ನದಿಗೆ ಬಿದ್ದ ಪತಿ ಈಜಿಕೊಂಡು ಬಂದು ಬಂಡೆಯೊಂದರ ಮೇಲೆ ಕುಳಿತಿದ್ದಾನೆ. ಆತನ ಕಿರುಚಾಟ ಕೇಳಿದ ಅಕ್ಕಪಕ್ಕದವರು ಸ್ಥಳಕ್ಕೆ ಧಾವಿಸಿ, ಸುಮಾರು 2 ಗಂಟೆಗಳ ಕಾಲ ನದಿಯಲ್ಲಿಯೇ ಇದ್ದ ಆತನನ್ನು ಹಗ್ಗದ ಸಹಾಯದಿಂದ ರಕ್ಷಿಸಿದ್ದಾರೆ.

ರಾಯಚೂರಿನ ಶಕ್ತಿನಗರದ ನಿವಾಸಿಗಳಾದ ಈ ದಂಪತಿಗಳ ನಡುವೆ ಜಗಳವಾಗಿದ್ದು, ಇದರ ಪರಿಣಾಮವಾಗಿ ಪತ್ನಿಯು ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಫೋಟೋ ತೆಗೆಯುವ ನೆಪದಲ್ಲಿ ಈ ಕೃತ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.