
ಮೈಸೂರು: ಶಕ್ತಿ ಯೋಜನೆ ಜಾರಿಯಾದ ಬಳಿಕ ಬಸ್‌ನಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಗಣನೀಯವಾಗಿ ಹೆಚ್ಚಳಗೊಂಡಿದೆ. ಇದರಿಂದಾಗಿ ಗಂಡಸರು ತಮ್ಮ ಸೀಟು ಗಿಟ್ಟಿಸಲು ತೊಂದರೆ ಅನುಭವಿಸುತ್ತಿದ್ದಾರೆ ಎಂಬ ಅಹವಾಲುಗಳು ಕೆಸ್ಆರ್ ಟಸಿ ಗೆ ಬಂದಿದ್ದು, ಇದೀಗ ಈ ಸಮಸ್ಯೆಗೆ ಸ್ಪಂದಿಸಿ ಹೊಸ ಆದೇಶ ಹೊರಡಿಸಲಾಗಿದೆ.
KSRTC ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿಯು ಇತ್ತೀಚೆಗೆ ಹೊರಡಿಸಿರುವ ಆದೇಶದ ಪ್ರಕಾರ, ಪುರುಷ ಪ್ರಯಾಣಿಕರಿಗೆ ಮೀಸಲಾದ ಆಸನಗಳಲ್ಲಿ ಮಹಿಳೆಯರು ಕುಳಿತುಕೊಳ್ಳಬಾರದು. ಇದನ್ನು ಪ್ರಯಾಣಿಕರು ಪಾಲಿಸಬೇಕು ಮತ್ತು ಚಾಲಕ-ನಿರ್ವಾಹಕರು ಈ ನಿಯಮದ ಅನುಸರಣೆ ಕಡ್ಡಾಯವಾಗಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಈ ಹೊಸ ಆದೇಶವು, ಮೈಸೂರು ಮೂಲದ ವಿಷ್ಣುವರ್ಧನ್.ಎಸ್ ಎಂಬವರು KSRTC ಕೇಂದ್ರ ಕಚೇರಿಗೆ ಸಲ್ಲಿಸಿದ ದೂರು ಆಧಾರದ ಮೇಲೆ ಹೊರಬಿದ್ದಿದೆ. ಬಸ್‌ಗಳಲ್ಲಿ ಪುರುಷ ಪ್ರಯಾಣಿಕರ ಹಕ್ಕುಗಳು ಕಾಪಾಡಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶದ ಅನುಸರಣೆ ಬಗ್ಗೆ ವರದಿ ಸಲ್ಲಿಸಲು ಸೂಚನೆಯೂ ನೀಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.