spot_img

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Date:

spot_img

ಕಾರ್ಕಳ : ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ದಿನಾಂಕ 09-08-2025 ರಂದು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು.

ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶ್ರೀ ಶಿವಕುಮಾರ್ ರವರು, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ. ಎಂಬ ಎಚ್ಚರಿಕೆಯ ನುಡಿಗಳೊಂದಿಗೆ, ಅದನ್ನು ಹೋಗಲಾಡಿಸುವಲ್ಲಿ ಯುವಜನತೆಯ ಜವಾಬ್ದಾರಿ ಮಹತ್ತರವಾದುದು ಮತ್ತು ಅಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರನ್ನು ಕಾನೂನಿನ ಮೂಲಕ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಎಂದು ಕಾನೂನಿನ ಅರಿವನ್ನು ಮೂಡಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಪೋಕ್ಸೋ ಕಾನೂನು, ಸಂಚಾರ ನಿಯಮಗಳ ಬಗ್ಗೆ ಅರಿವು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಆಗುವ ಸಮಸ್ಯೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು ” ದೇಶದ ಕಾನೂನಿಗೆ ನಾವೆಲ್ಲರೂ ತಲೆಬಾಗಿ ಅದನ್ನು ಪರಿಪಾಲಿಸಿದಾಗ ನಮಗೆ ಆತಂಕಗಳಿಲ್ಲ ನಾವೆಲ್ಲರೂ ಸುರಕ್ಷಿತ” ಎಂದು ನುಡಿದರು. ವೇದಿಕೆಯಲ್ಲಿ ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶ್ರೀ ಸಂತೋಷ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಶ್ರೀ ಸಂತೋಷ್ ರವರು ನಿರೂಪಿಸಿ ವಂದಿಸಿದರು. ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಹಾಲು ಕುಡಿಯುತ್ತೀರಾ?: ಇಲ್ಲಿದೆ ಆರೋಗ್ಯ ತಜ್ಞರ ಅಭಿಪ್ರಾಯ

ಆರೋಗ್ಯ ತಜ್ಞರ ಪ್ರಕಾರ, ಖಾಲಿ ಹೊಟ್ಟೆಯಲ್ಲಿ ಡೈರಿ ಉತ್ಪನ್ನಗಳನ್ನು ಸೇವಿಸುವುದರಿಂದ ಕೆಲವರಿಗೆ ಪ್ರಯೋಜನವಾದರೆ, ಇನ್ನು ಕೆಲವರಿಗೆ ತೊಂದರೆ ಉಂಟಾಗಬಹುದು.

ಭಾರತದ ವಾಹನ ಮಾರುಕಟ್ಟೆಗೆ ಕ್ವಾಲ್ಕಾಮ್‌ನ ‘ಡಿಜಿಟಲ್ ಚಾಸಿಸ್’: ಸ್ಮಾರ್ಟ್‌ ಕಾರ್‌ಗಳು ಇನ್ನಷ್ಟು ಸುರಕ್ಷಿತ

ಕ್ವಾಲ್ಕಾಮ್ ತನ್ನ ಸ್ನಾಪ್‌ಡ್ರಾಗನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಭಾರತದ ವಾಹನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ.

ವೀರೇಂದ್ರ ಹೆಗ್ಗಡೆಯವರ ಒಳ್ಳೆ ಕೆಲಸ ಕಾಣಿಸುತ್ತಿಲ್ಲವೇ?: ಅಪಪ್ರಚಾರದ ವಿರುದ್ಧ ವಚನಾನಂದ ಶ್ರೀಗಳ ಆಕ್ರೋಶ

ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರವಾಗಿ ಪ್ರಬಲವಾಗಿ ಮಾತನಾಡಿದರು.

ರೀಲ್ಸ್‌ಗಾಗಿ ಈ ಪರಿಯ ಹುಚ್ಚಾಟವೇ? ಉರಿಯುವ ಚಿತೆಯ ಮುಂದೆ ನಗುತ್ತಾ ವಿಡಿಯೋ ಮಾಡಿದ ಯುವತಿ

ಯುವತಿಯೊಬ್ಬಳು ಸ್ಮಶಾನದಲ್ಲಿ ಉರಿಯುತ್ತಿರುವ ಚಿತೆಯ ಮುಂದೆ ನಗುತ್ತಾ ಫೋಸ್ ಕೊಟ್ಟು ವಿಡಿಯೋ ಮಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ