ಅಯೋಧ್ಯೆಯಲ್ಲಿ 26.17 ಲಕ್ಷ ದೀಪ ಬೆಳಗಿಸಿ ವಿಶ್ವ ದಾಖಲೆ: ಕಳೆದ ವರ್ಷದ ದಾಖಲೆ ಬ್ರೇಕ್

Date:

spot_img

ಅಯೋಧ್ಯೆ: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ರಾಮ ಜನ್ಮಭೂಮಿ ಅಯೋಧ್ಯೆ ಮತ್ತೊಮ್ಮೆ ಜಗತ್ತಿನ ಗಮನ ಸೆಳೆದಿದೆ. ರವಿವಾರದಂದು ಸರಯೂ ನದಿಯ ಉದ್ದಕ್ಕೂ 26.17 ಲಕ್ಷ ದೀಪಗಳನ್ನು ಏಕಕಾಲಕ್ಕೆ ಹಚ್ಚುವ ಮೂಲಕ ಈ ಬಾರಿಯ ದೀಪೋತ್ಸವವು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಿದೆ ಎಂದು ಉತ್ತರಪ್ರದೇಶ ಸರ್ಕಾರ ಘೋಷಿಸಿದೆ.

ಕಳೆದ ವರ್ಷ 25 ಲಕ್ಷ ದೀಪಗಳನ್ನು ಹಚ್ಚುವ ಮೂಲಕ ಅಯೋಧ್ಯೆ ವಿಶ್ವ ದಾಖಲೆ ಬರೆದಿತ್ತು. ಈ ಬಾರಿ ಆ ದಾಖಲೆಯನ್ನು ಮುರಿದು ಇತಿಹಾಸ ನಿರ್ಮಿಸಲಾಗಿದೆ.

ದೀಪೋತ್ಸವದ ಭಾಗವಾಗಿ 2,128 ಮಂದಿ ಆರತಿ ನೆರವೇರಿಸಿದರು. ಒಟ್ಟು 26,17,215 ದೀಪಗಳನ್ನು ಬೆಳಗಿಸಲಾಗಿದ್ದು, ಗಿನ್ನೆಸ್ ದಾಖಲೆಯ ಪ್ರತಿನಿಧಿಗಳು ಡ್ರೋನ್‌ಗಳನ್ನು ಬಳಸಿ ದೀಪಗಳ ಸಂಖ್ಯೆಯನ್ನು ಲೆಕ್ಕಹಾಕಿ ದಾಖಲೆ ಎಂದು ಘೋಷಿಸಿದ್ದಾರೆ ಎಂದು ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಉತ್ತರಪ್ರದೇಶದ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಜೈವೀರ್ ಸಿಂಗ್ ಹಾಗೂ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜತ್ ಅವರು ಗಿನ್ನೆಸ್ ದಾಖಲೆಯ ಪ್ರಮಾಣ ಪತ್ರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪ್ರದಾನ ಮಾಡಿದರು.

ಈ ವೇಳೆ ದೀಪೋತ್ಸವದಲ್ಲಿ ಏಕಕಾಲದಲ್ಲಿ ಅತೀ ಹೆಚ್ಚು ಜನರು ಹಣತೆಗಳನ್ನು ಹಚ್ಚಿ ಪ್ರದರ್ಶಿಸಿರುವುದಕ್ಕಾಗಿ ಮತ್ತೊಂದು ಪ್ರಶಸ್ತಿ ಲಭಿಸಿದ್ದು, ಒಂದೇ ದಿನದಲ್ಲಿ ಅಯೋಧ್ಯೆ ಎರಡು ಸಾಧನೆ ಮಾಡಿದಂತಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, “ಒಂದು ಕಾಲದಲ್ಲಿ ಉತ್ತರ ಪ್ರದೇಶದ ಬಿಕ್ಕಟ್ಟು ಪ್ರದೇಶವಾದ ರಾಮ ಜನ್ಮ ಭೂಮಿಯಲ್ಲಿ ಗುಂಡುಗಳನ್ನು ಹಾರಿಸಲಾಗುತ್ತಿತ್ತು. ಈಗ ನಾವು ದೀಪಗಳನ್ನು ಬೆಳಗಿಸುತ್ತಿದ್ದೇವೆ,” ಎಂದು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.