
ಕೊಪ್ಪಳ: ರಾಜ್ಯದಲ್ಲಿ “ಲವ್ ಜಿಹಾದ್” ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಅಭಿಯಾನ ಘೋಷಿಸಿದ್ದಾರೆ. ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಪ್ರೀತಿಸಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಜೊತೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. “ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ಸಿದ್ದರಾಮಯ್ಯ ಸರ್ಕಾರವು ಅಹಿಂದ ಸರ್ಕಾರವಲ್ಲ, ಇದು ಅಲ್ಪಸಂಖ್ಯಾತರ ಪರ ಸರ್ಕಾರ” ಎಂದು ಟೀಕಿಸಿದರು.
“ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿಸಬಾರದಾ? ಅವರನ್ನು ಮದುವೆಯಾಗಬಾರದೆಂದು ಎಲ್ಲಿದೆ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನೀಡುವ ಅಭಿಯಾನ ಆರಂಭಿಸಲಿದ್ದೇವೆ” ಎಂದು ಹೇಳಿದರು.
ಅಲ್ಲದೆ, “ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರೀಲ್ಸ್‌ನಲ್ಲಿ ಮಚ್ಚು ತೋರಿಸಿರುವ ಆರೋಪಿಗಳನ್ನು ಬಂಧಿಸಲಾಗಿದೆ. ಗವಿಸಿದ್ದಪ್ಪ ಪ್ರೀತಿಸುತ್ತಿದ್ದ ಹುಡುಗಿಯನ್ನು ಕೂಡ ಬಂಧಿಸಬೇಕು. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುತ್ತೇನೆ. ಮಚ್ಚು ಹಿಡಿದು ಓಡಾಡುವವರಿಗೆ ರಾಜ್ಯ ಸರ್ಕಾರದ ಬೆಂಬಲವಿದೆ” ಎಂದು ಅವರು ಟೀಕಿಸಿದ್ದಾರೆ.