ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ನೀಡುತ್ತೇವೆ: ಯತ್ನಾಳ್ ಹೊಸ ಅಭಿಯಾನ ಘೋಷಣೆ

Date:

spot_img
yatnal11

ಕೊಪ್ಪಳ: ರಾಜ್ಯದಲ್ಲಿ “ಲವ್ ಜಿಹಾದ್” ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಅಭಿಯಾನ ಘೋಷಿಸಿದ್ದಾರೆ. ಹಿಂದೂ ಯುವಕ ಮುಸ್ಲಿಂ ಯುವತಿಯನ್ನು ಮದುವೆಯಾದರೆ ₹5 ಲಕ್ಷ ನೀಡುವುದಾಗಿ ಹೇಳಿಕೆ ನೀಡಿದ್ದಾರೆ.

ಕೊಪ್ಪಳದಲ್ಲಿ ಪ್ರೀತಿಸಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಜೊತೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. “ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ಸಿದ್ದರಾಮಯ್ಯ ಸರ್ಕಾರವು ಅಹಿಂದ ಸರ್ಕಾರವಲ್ಲ, ಇದು ಅಲ್ಪಸಂಖ್ಯಾತರ ಪರ ಸರ್ಕಾರ” ಎಂದು ಟೀಕಿಸಿದರು.

“ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿಸಬಾರದಾ? ಅವರನ್ನು ಮದುವೆಯಾಗಬಾರದೆಂದು ಎಲ್ಲಿದೆ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ ₹5 ಲಕ್ಷ ನೀಡುವ ಅಭಿಯಾನ ಆರಂಭಿಸಲಿದ್ದೇವೆ” ಎಂದು ಹೇಳಿದರು.

ಅಲ್ಲದೆ, “ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರೀಲ್ಸ್‌ನಲ್ಲಿ ಮಚ್ಚು ತೋರಿಸಿರುವ ಆರೋಪಿಗಳನ್ನು ಬಂಧಿಸಲಾಗಿದೆ. ಗವಿಸಿದ್ದಪ್ಪ ಪ್ರೀತಿಸುತ್ತಿದ್ದ ಹುಡುಗಿಯನ್ನು ಕೂಡ ಬಂಧಿಸಬೇಕು. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸುತ್ತೇನೆ. ಮಚ್ಚು ಹಿಡಿದು ಓಡಾಡುವವರಿಗೆ ರಾಜ್ಯ ಸರ್ಕಾರದ ಬೆಂಬಲವಿದೆ” ಎಂದು ಅವರು ಟೀಕಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.