ಇಂದು ದಿಲ್ಲಿಗೆ ಯತ್ನಾಳ್ ಬಣ! ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ

Date:

spot_img

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಸಮೀಪಿಸುತ್ತಿರುವಂತೆ, ಪಕ್ಷದ ಒಳಗಿನ ಆಂತರಿಕ ರಾಜಕೀಯ ತೀವ್ರಗೊಳ್ಳುತ್ತಿದೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಬಣ, ಸೋಮವಾರದಿಂದ ನಾಲ್ಕು ದಿನಗಳ ಕಾಲ ದಿಲ್ಲಿಯಲ್ಲಿ ಬೀಡು ಬೀಡಲಿದ್ದು, ಹೈಕಮಾಂಡ್ ಒಲವು ಸಂಪಾದಿಸಲು ಮುಂದಾಗಿದೆ.

ಭಾನುವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಹಾಗೂ ಇತರ ಪ್ರಮುಖರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ದಿಲ್ಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಈ ತಂಡದ ಪ್ರಮುಖರಾದ ಅರವಿಂದ ಲಿಂಬಾವಳಿ ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದು, ಉಳಿದ ನಾಯಕರೂ ದಿಲ್ಲಿಯಲ್ಲಿ ಹೈಕಮಾಂಡ್ ಭೇಟಿಗೆ ಅವಕಾಶಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ಸದ್ಯ ಸಂಸತ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುಲಭ ಭೇಟಿಗೆ ಅವಕಾಶ ಸಿಗಬಹುದು ಎಂಬ ಲೆಕ್ಕಾಚಾರದಲ್ಲಿ ಈ ಬಣ ದಿಲ್ಲಿಗೆ ತೆರಳುತ್ತಿದೆ. ಇದೇ ತಂಡ ಸಂಸತ್‌ನಲ್ಲಿ ಸೋಮವಾರ ಮಂಡನೆಯಾಗಲಿರುವ ವಕ್ಸ್ ಆಸ್ತಿಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವರದಿಯನ್ನೂ ಸಾಕ್ಷೀಕರಿಸುವ ಸಾಧ್ಯತೆ ಇದೆ. ಸಂಸತ್‌ನಲ್ಲಿ ಜಗದಂಬಿಕಾ ಪಾಲ್ ಈ ವರದಿಯನ್ನು ಮಂಡಿಸಲಿದ್ದಾರೆ.

ಫೆಬ್ರವರಿ 5ರಂದು ದಿಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವುದು, ನಂತರ ಫಲಿತಾಂಶ ಹಾಗೂ ಸರ್ಕಾರ ರಚನೆ ಕಸರತ್ತು ನಡೆಯುವ ಕಾರಣ, ಬಿಜೆಪಿ ಹೈಕಮಾಂಡ್ ಈ ನಡುವೆಯೂ ರಾಜ್ಯಾಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಮಾತುಕತೆ ನಡೆಸಬಹುದೆಂಬ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ, ಇತ್ತೀಚೆಗೆ ನಡೆದ ಜಿಲ್ಲಾಧ್ಯಕ್ಷರ ಆಯ್ಕೆ ಕ್ರಮಬದ್ಧವಾಗಿರಲಿಲ್ಲ ಎಂಬ ಗಂಭೀರ ದೂರುಗಳನ್ನು ಹೈಕಮಾಂಡ್‌ಗೆ ಈ ಬಣ ತಿಳಿಸುವ ಸಾಧ್ಯತೆಯೂ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.