ಮುದ್ರಾಡಿ ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

Date:

spot_img

“ದೇಹ ಮತ್ತು ಮನಸ್ಸುಗಳನ್ನು ಬೆಸೆಯುವ ಆಧ್ಯಾತ್ಮಿಕ ಪ್ರಕ್ರಿಯೆಯೇ ಯೋಗ “-ಬಲ್ಲಾಡಿ ಚಂದ್ರಶೇಖರ ಭಟ್

ಹೆಬ್ರಿ :ಪ್ರತಿನಿತ್ಯವೂ ಕ್ರಮಬದ್ದವಾಗಿ ಯೋಗಾಸನಗಳನ್ನು ಮಾಡುವುದರಿಂದ ನಾವು ಆರೋಗ್ಯವಂತರಾಗಿ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು.ಯೋಗಾಸನ ಮಾಡುವುದರಿಂದ ದೇಹದ ಪ್ರತಿಯೊಂದು ಭಾಗಕ್ಕೆ ರಕ್ತ ಸಂಚಾರ ಸರಿಯಾಗಿ ಆಗುತ್ತದೆ. ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಮಾನಸಿಕ ಸ್ಥಿರತೆ ಹಾಗೂ ಏಕಾಗ್ರತೆಯು ಹೆಚ್ಚಾಗುತ್ತದೆ. ಬೊಜ್ಜು, ಅಧಿಕ ರಕ್ತದೊತ್ತಡ ಮತ್ತು ಹೃದಯದ ತೊಂದರೆಗಳು ಸೇರಿ ಅನೇಕ ರೋಗಗಳನ್ನು ನಿವಾರಿಸುವ ಸಾಮರ್ಥ್ಯ ಯೋಗಕ್ಕಿದೆ.ದೇಹ ಮತ್ತು ಮನಸ್ಸುಗಳನ್ನು ಬೆಸೆಯುವ ಯೋಗಾಭ್ಯಾಸವನ್ನು ಎಲ್ಲರೂ ಅನುಸರಿಸುವುದು ಉತ್ತಮ ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಹೇಳಿದರು.

ಅವರು ತಮ್ಮ ಶಾಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಘುಪತಿ ಹೆಬ್ಬಾರ್ ಸ್ವಾಗತಿಸಿ, ಯೋಗಾಸನವನ್ನು ನಡೆಸಿಕೊಟ್ಟರು. ಶಿಕ್ಷಕ ಪಿ. ವಿ. ಆನಂದ ಸಾಲಿಗ್ರಾಮ ವಂದಿಸಿದರು. ಶಾಲಾ ಶಿಕ್ಷಕರಾದ ಮಹೇಶ್ ನಾಯ್ಕ್, ಶ್ಯಾಮಲಾ ಕೊಠಾರಿ, ಚಂದ್ರಕಾಂತಿ ಹೆಗ್ಡೆ, ಶಿಕ್ಷಕೇತರ ಸಿಬ್ಬಂದಿ ಮಹೇಶ್ ಎಂ.ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.