ಪಾಣಾಜೆ ಗ್ರಾಮದಲ್ಲಿ ಯುವಕನಿಗೆ ಬಿಯರ್ ಬಾಟಲಿಯಿಂದ ಹಲ್ಲೆ: ಇಬ್ಬರು ಆರೋಪಿ ಪರಾರಿ

Date:

spot_img

ಪುತ್ತೂರು : ಪಾಣಾಜೆ ಗ್ರಾಮದ ಅರ್ಧಮೂಲೆಯಲ್ಲಿ ಪರಿಚಯಸ್ಥರೆಂದು ಹೇಳಲಾಗುತ್ತಿರುವ ಇಬ್ಬರು ಯುವಕರು 28 ವರ್ಷದ ಯುವಕನೊಬ್ಬನಿಗೆ ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಮೇ 25ರ ರಾತ್ರಿ ನಡೆದಿದೆ.

ಆರ್ಲಪದವು ನಿವಾಸಿ ಪ್ರಕಾಶ್ ಎಂಬವರು ಹಲ್ಲೆಗೊಳಗಾದವರಾಗಿದ್ದು, ಧನಂಜಯ ಮತ್ತು ಪುನೀತ್ ಎಂಬುವವರನ್ನು ಆರೋಪಿಗಳಾಗಿ ಗುರುತಿಸಲಾಗಿದೆ.

ಅದರಂತೆ, ಬೆಳಗ್ಗೆ ಬಿಯರ್ ಖರೀದಿಸಿ ಪಾಣಾಜೆಯ ವೈನ್ ಶಾಪ್‌ ಬಳಿ ಇರುವ ಶೆಡ್‌ನಲ್ಲಿ ಕುಳಿತು ಸೇವಿಸುತ್ತಿದ್ದ ಪ್ರಕಾಶ್‌ ಅವರ ಬಳಿ ರಾತ್ರಿ ಸುಮಾರು 8.30ಕ್ಕೆ ಆರೋಪಿಗಳು ಬಂದು, ಹೇಳಿಕೇಳದೆ ಬೈಯ್ಯಲು ಪ್ರಾರಂಭಿಸುತ್ತಾರೆ. ತಕ್ಷಣವೇ ಧನಂಜಯ ಬಿಯರ್ ಬಾಟಲಿಯಿಂದ ಪ್ರಕಾಶ್ ಅವರ ತಲೆಗೆ ಹೊಡೆದು, ಪುನೀತ್ ಅವರು ಕೈ ಹಾಗೂ ಕಾಲಿನಿಂದ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ಉಲ್ಲೇಖವಾಗಿದೆ.

ನೋವಿನಿಂದ ಬೊಬ್ಬೆ ಹಾಕುತ್ತಿದ್ದ ಪ್ರಕಾಶ್‌ರವರನ್ನು ಬಿಟ್ಟು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ, ಪ್ರಕಾಶ್ ಅವರ ಅಣ್ಣ ಸ್ಥಳಕ್ಕಾಗಮಿಸಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದ್ದಾನೆ.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ IPC ಕಲಂ 115(2), 118(1), 352 ಮತ್ತು 3(5) BNS ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ