
ಪುತ್ತೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಅನ್ಯಕೋಮಿನ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುರ ನಿವಾಸಿ ಸಫಾನ್ ಅಲಿಯಾಸ್ ಅಫ್ಘಾನ್ ಈ ಪ್ರಕರಣದ ಆರೋಪಿಯಾಗಿದ್ದಾನೆ.
ಪೋಕ್ಸೋ, ದಲಿತ ದೌರ್ಜನ್ಯ ಪ್ರಕರಣ ದಾಖಲು
ಆರೋಪಿ ಸಫಾನ್, ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದಾನೆಂದು ಆರೋಪಿಸಲಾಗಿದೆ. ಈ ಕೃತ್ಯದಿಂದಾಗಿ ಅಪ್ರಾಪ್ತೆ ಗರ್ಭವತಿಯಾಗಿದ್ದಾಳೆ. ಘಟನೆಯ ಗಂಭೀರತೆ ಪರಿಗಣಿಸಿ, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ (ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ರಕ್ಷಣೆ ಕಾಯ್ದೆ) ಅಡಿಯಲ್ಲಿ ಹಾಗೂ ಬಾಲಕಿ ದಲಿತ ಸಮುದಾಯಕ್ಕೆ ಸೇರಿರುವುದರಿಂದ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸದ್ಯ ಪೊಲೀಸರು ಆರೋಪಿಯ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.