
ಬೆಂಗಳೂರು: ಇಡೀ ರಾಜ್ಯದ ಗಮನ ಸೆಳೆದಿದ್ದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಯೂಟ್ಯೂಬರ್ “ದೂತ ಸಮೀರ್” ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿರುವುದರಿಂದ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಈ ಕುರಿತು ಬುಧವಾರ ಫ್ಯಾಕ್ಸ್ ಮೂಲಕ ಎಲ್ಲಾ ಜಿಲ್ಲಾ ಎಸ್ಪಿಗಳಿಗೆ ಆದೇಶ ರವಾನಿಸಿ, ಸಮಾಜದಲ್ಲಿ ಪರ, ವಿರೋಧ ಚರ್ಚೆಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಅಧಿಕಾರಿಗಳಿಗೆ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ಸೆಲ್‌ಗಳನ್ನು ಚುರುಕುಗೊಳಿಸಲು ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ಎಡಿಜಿಪಿಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.