
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಟೂರ್ನಿಯಲ್ಲ. ಅದು ಭಾರತದಲ್ಲಿ ಕ್ರಿಕೆಟ್ ಹಬ್ಬದಂತೆ ಪ್ರತಿ ವರ್ಷ ಆಚರಿಸಲಾಗುತ್ತದೆ. ಸ್ಟಾರ್ ಆಟಗಾರರ ಆಟ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಎದುರು ನೋಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ಮುಂದಿನ ಆವೃತ್ತಿಯ ಟೂರ್ನಿ ಬಹಳಾ ಕುತೂಹಲ ಕೆರಳುವಂತೆ ಮಾಡಿದೆ. ಏಕೆಂದರೆ 18ನೇ ಆವೃತ್ತಿಯ ಐಪಿಎಲ್ ಸಲುವಾಗಿ ಇದೇ ವರ್ಷ ಡಿಸೆಂಬರ್‌ನಲ್ಲಿ ಮೆಗಾ ಆಕ್ಷನ್ ನಡೆಯಲಿದ್ದು, ಹಲವು ಸ್ಟಾರ್ ಆಟಗಾರರು ಬೇರೆ ಬೇರೆ ತಂಡಗಳ ಪಾಲಾಗುವ ಸಾಧ್ಯತೆ ಹೆಚ್ಚಿದೆ.
ಅದರಲ್ಲಿ ಕರ್ನಾಟಕದ ಕಲಿ ಕೆಎಲ್ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹಿಂದಿರುಗಲಿದ್ದಾರೆ ಎಂಬ ಸುದ್ದಿ ನೆಟ್ ಲೋಕದಲ್ಲಿ ಭಾರಿ ಸದ್ದು ಮಾಡುತ್ತಿದೆ. 2013ರಲ್ಲಿ ಆರ್‌ಸಿಬಿ ತಂಡ ಸೇರಿ ತಮ್ಮ ಇಂಡಿಯನ್ ಪ್ರೀಮಿಯರ್ ಲೀಗ್ ಕೆರಿಯರ್ ಶುರು ಮಾಡಿದ್ದ ಕೆಎಲ್ ರಾಹುಲ್, ಬಳಿಕ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳನ್ನು ಪ್ರತಿನಿಧಿಸಿ, ಈಗ ಕಳೆದ 3 ಆವೃತ್ತಿಗಳಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡದ ಕ್ಯಾಪ್ಟನ್ ಆಗಿದ್ದಾರೆ.