
ಕಾರ್ಕಳ: ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭಹಾರೈಸಿದ್ದಾರೆ.