
ಕಾರ್ಕಳ : ವಿದ್ಯಾರ್ಥಿಯ ಸಾಧನೆಯ ಹಿಂದೆ ಗುರುಗಳ ಪಾತ್ರ ಮಹತ್ವದ್ದು. ಅಂತಹ ಗುರುಗಳನ್ನು ಯಾವುದೇ ಕ್ಷೇತ್ರದಲ್ಲಿ ಮುನ್ನುಗ್ಗುವವರು ಆರಿಸಿಕೊಳ್ಳ ಬೇಕು. ಅಡೆತಡೆಗಳನ್ನು ಸಾಧನೆಯ ಏಣಿಯಾಗಿಸಿಕೊಂಡವರು ಸಾಧಕರಾಗಿ ಹೊರಬರುತ್ತಾರೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ, ದೈ.ಶಿ.ವಿಭಾಗದ ಮುಖ್ಯಸ್ಥ ಶ್ರೀ ರಮೇಶ್ ಎಚ್ ಹೇಳಿದರು.
ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟ-2024ರ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಸಿ ಮಾತನಾಡಿದರು. ಶೈಕ್ಷಣಿಕ ಕ್ಷೇತ್ರ ಮಾತ್ರವಲ್ಲದೆ ಸಾಂಸ್ಕೃತಿಕವಾಗಿ, ಹಾಗೂ ಕ್ರೀಡೆಯನ್ನು ಉತ್ತೇಜಿಸುತ್ತಿರುವ ಇಲ್ಲಿನ ಆಡಳಿತ ಮಂಡಳಿಯ ಕಾರ್ಯ ಶ್ಲಾಘನೀಯ, ಇಲ್ಲಿನ ಕ್ರೀಡಾಂಗಣವು ರಾಜ್ಯ ಹಾಗೂ ರಾಷ್ಟ್ರೀಯ ಕ್ರೀಡಾಕೂಟ ನಡೆಸುವುದಕ್ಕೂ ಸುಯೋಗ್ಯವಾಗಿದೆ ಎಂದು ಕೊಂಡಾಡಿದರು.