ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಸೆಕ್ಯೂರಿಟಿ ಗಾರ್ಡ್‌ವೊಬ್ಬ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸರು ಓರ್ವ ಯುವತಿಯನ್ನು ರಕ್ಷಿಸಿ, ಆರೋಪಿಯನ್ನು ಬಂಧಿಸಿದ್ದಾರೆ.
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 300ಕ್ಕೂ ಹೆಚ್ಚು ಮಂದಿಯಿಂದ ಸುಮಾರು ₹4 ಕೋಟಿಗೂ ಅಧಿಕ ವಂಚನೆ ಮಾಡಿದ ಆರೋಪದಡಿ, ಇಬ್ಬರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.
ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕುಂದಾಪುರ ಪೊಲೀಸರು ಎರಡು ಲಕ್ಷಕ್ಕೂ ಹೆಚ್ಚು ಮೌಲ್ಯದ ಎಂಡಿಎಂಎ ದ್ರವ್ಯವನ್ನು ಜಪ್ತಿ ಮಾಡಿದ್ದಾರೆ. ಜೂನ್ 4 ರಂದು ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಈ ದಾಳಿಯನ್ನು ನಡೆಸಲಾಗಿದೆ.