ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು, ಅದರ ಚಾಲಕನನ್ನು ಬಂಧಿಸಿದ್ದಾರೆ.
ಕಳೆದ ಐದು ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಆಗಮಿಸಿದ್ದ ಉತ್ತರ ಕನ್ನಡದ ಕಾರವಾರ ಮೂಲದ ಪಿಎಸ್‌ಐ ಖೀರಪ್ಪ ಗಟಕಾಂಬೆ (55) ಅವರು ಬಂಟ್ವಾಳ ಪೇಟೆಯಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ಭಾನುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರೇಮ ವೈಫಲ್ಯದಿಂದ ಕುಪಿತಗೊಂಡ ಯುವಕನೊಬ್ಬ, ಮದುವೆಯಾಗಲು ನಿರಾಕರಿಸಿದ ಪ್ರಿಯತಮೆಗೆ ಚಾಕುವಿನಿಂದ ಇರಿದು, ಆಕೆ ಮೃತಪಟ್ಟಳೆಂದು ತಪ್ಪಾಗಿ ಭಾವಿಸಿ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘೋರ ಘಟನೆ ಇಂದು ಬೆಳಿಗ್ಗೆ ಫರಂಗಿಪೇಟೆಯ ಸುಜೀರ್ ಮಲ್ಲಿ ಎಂಬಲ್ಲಿ ನಡೆದಿದೆ.
ಶನಿವಾರ ಮಧ್ಯಾಹ್ನ ಕೆಳಗಿನ ತುಂಬೆ ಎಂಬಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತಪಟ್ಟವರನ್ನು ಪಾವೂರು ನಿವಾಸಿ ನೌಫಲ್ ಎಂದು ಗುರುತಿಸಲಾಗಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ