ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ 11 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವೈದ್ಯಾಧಿಕಾರಿ ಡಾ. ಚಂದ್ರಕಾಂತ್ ಅವರನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಜೂನ್ 2ರಂದು ಬೆಳ್ತಂಗಡಿಯ ನಾಲ್ಕು ಪ್ರಮುಖ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹೃದಯಾಘಾತದಿಂದ ಒಂಭತ್ತನೇ ತರಗತಿ ಪೂರ್ಣಗೊಳಿಸಿ ಹತ್ತನೇ ತರಗತಿಗೆ ಹೋಗಬೇಕಿದ್ದ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ದುಃಖದ ಘಟನೆ ಮೇ 4ರಂದು ನಡೆದಿದೆ.