ಇನ್ನೋನೆಕ್ಸ್ಟ್ ಮೈಂಡ್ ಪ್ರೈವೇಟ್ ಲಿಮಿಟೆಡ್ (ಏರಿಯನ್ ಭಾರತ್) ಆಶ್ರಯದಲ್ಲಿ ಗುರುವಾರ ನಡೆದ ಆಸ್ಟ್ರಾನೊಮಿ ಎಕ್ಸ್‌ಪೋ 1.0ರ ಆವೃತ್ತಿ ನಗರದ ಮಂತ್ರಿ ಮಾಲ್‌ನ ಐನಾಕ್ಸ್ ಚಿತ್ರಮಂದಿರಲ್ಲಿ ಗುರುವಾರ ಉದ್ಘಾಟನೆಗೊಂಡಿತು.
ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ (RBI) ಲಕ್ಷಾಂತರ ರೂಪಾಯಿ ಮೌಲ್ಯದ ನಾಣ್ಯಗಳನ್ನು ರಾಯಚೂರಿಗೆ ಸಾಗಿಸುತ್ತಿದ್ದ ಲಾರಿಯೊಂದು ನೆಲಮಂಗಲ ತಾಲೂಕಿನ ರಾಯರಪಾಳ್ಯ ಗೇಟ್ ಬಳಿ ಹಳ್ಳಕ್ಕೆ ಉರುಳಿ ಬಿದ್ದಿದೆ.
ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ.
ಇತ್ತೀಚೆಗೆ, ರಕ್ತ ನಿಧಿ ಘಟಕಗಳಲ್ಲಿ ಸ್ವಚ್ಛತೆಯ ಕೊರತೆ, ರಕ್ತ ಸಂಗ್ರಹ ಘಟಕದಲ್ಲಿ ನಿಯಮಗಳ ಉಲ್ಲಂಘನೆ ಮತ್ತು ಅವ್ಯವಹಾರಗಳ ಕುರಿತು ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ರಕ್ತ ಸಂಗ್ರಹ ಘಟಕಗಳ ತಪಾಸಣೆಯನ್ನು ತೀವ್ರಗೊಳಿಸಿದೆ.
ರಾಜಧಾನಿಯ ವೈಟ್‌ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಆಘಾತಕಾರಿ ಘಟನೆ ನಡೆದಿದ್ದು, ಸಾಫ್ಟ್‌ವೇರ್ ಎಂಜಿನಿಯರ್ ಮಗಳು ಮತ್ತು ಅವರ ತಾಯಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.