ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು 'ಗೊತ್ತಿಲ್ಲ ಸಚಿವರು' ಎಂದು ಟ್ರೋಲ್ ಮಾಡುತ್ತಿರುವವರಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಚ್ಚರಿಯ ಉತ್ತರ ನೀಡಿದ್ದಾರೆ. "ದೇಶದಲ್ಲಿ ನಂಬರ್ ಒನ್ ಗೃಹ ಸಚಿವರು ಯಾರು ಎಂದು ಕುತೂಹಲ ಇದ್ದವರು ಚಾಟ್ ಜಿಪಿಟಿಯನ್ನು ಕೇಳಿ" ಎಂದು ಅವರು ಸವಾಲೆಸೆದರು.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ದೂರುದಾರನ ಬಂಧನದ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. "ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ" ಎಂದು ಅವರು ಸ್ಪಷ್ಟಪಡಿಸಿದರು.