ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಿ ನಾಲ್ಕು ತಿಂಗಳು ಕಳೆದಿದ್ದರೂ ಈವರೆಗೆ ಮೌಲ್ಯಮಾಪಕರ ಸಂಭಾವನೆ ಮತ್ತು ಭತ್ಯೆ ಬಿಡುಗಡೆ ಮಾಡದ ಸರಕಾರದ ಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ನಾಲ್ವರು ಗಣ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು, ಅವರಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡಿದ್ದರೂ ಸಮಾಜದಲ್ಲಿ ತಮ್ಮ ವಿಶಿಷ್ಟ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ಸದಾನಂದನ್ ಮಾಸ್ಟರ್ (ಸಿ. ಸದಾನಂದನ್ ಮಾಸ್ಟರ್) ಒಬ್ಬರು.
ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ಪೂರೈಸಿದ ಬಳಿಕ ಅಧಿಕಾರದಿಂದ ಕೆಳಗಿಳಿದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ.
ರಾಜ್ಯದಲ್ಲೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ಕಾರ್ಕಳದಲ್ಲಿ KGTTI (ಕರ್ನಾಟಕ ಜರ್ಮನ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪ್ರಾರಂಭಿಸಬೇಕೆಂಬುದು ನನ್ನ ಕನಸಾಗಿತ್ತು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ವ ಉದ್ಯಮ ನಡೆಸಲು ಕೌಶಲ್ಯ ಆಧಾರಿತ ತರಬೇತಿ ದೊರೆಯಬೇಕು
ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.