ಶ್ರೀ ಕ್ಷೇತ್ರದ ಬಗ್ಗೆ ಇರುವ ನಂಬಿಕೆ, ಧರ್ಮಾಧಿಕಾರಿಗಳ ಮುಖೇನ ನಡೆಯುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ವ್ಯವಸ್ಥಿತ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿರುವ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.
ಧರ್ಮ ಮತ್ತು ದೇವರ ವಿಷಯದಲ್ಲಿ ಜನರ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರವನ್ನು ದೇಶದ ಒಳಗೆ ಹಾಗೂ ಹೊರಗಿನ ಕೆಲವು ಶಕ್ತಿಗಳು ನಡೆಸುತ್ತಿವೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಟೀಕಿಸಿದ್ದಾರೆ.
ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇ ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.