ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಮತ್ತು ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸುವಂತೆ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾರ್ಕಳದ ಹೆಮ್ಮೆಯಾಗಬೇಕಿದ್ದ ಪರಶುರಾಮ ಥೀಮ್ ಪಾರ್ಕ್, ಶಾಸಕ ಸುನೀಲ್ ಕುಮಾರ್ ಅವರ ರಾಜಕೀಯ ಹಿತಾಸಕ್ತಿಗೆ ಬಲಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.
ಪರಶುರಾಮ ಥೀಂ ಪಾರ್ಕ್ ಬಗ್ಗೆ ಇಲ್ಲಸಲ್ಲದ ಅಪಸ್ವರ ಎತ್ತಿ ಯೋಜನೆಯ ಅನುಷ್ಠಾನ ವಿಳಂಬವಾಗುವುದಕ್ಕೆ ಹಾಗೂ ಪ್ರವಾಸೋದ್ಯಮ ಕುಂಟಿತಗೊಳ್ಳುವುದಕ್ಕೆ ಉದಯಕುಮಾರ್ ಶೆಟ್ಟಿಯವರ ರಾಜಕೀಯ ಅವಕಾಶವಾದಿತನವೇ ಕಾರಣವಾಗಿದ್ದು, ಕಾರ್ಕಳದ ಜನತೆ ಈ ದ್ರೋಹವನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ.