ಬಿಜೆಪಿಯ 'ಸುಳ್ಳಿನ ಪ್ರತಿಭಟನೆ'ಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ 'ಸತ್ಯದರ್ಶನ' ಪ್ರತಿಭಟನೆ ನಡೆಸಿ, ರಾಜಕೀಯ ಸಮರಕ್ಕೆ ಇಳಿದಿದೆ. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಮಂಗಳವಾರ ಅಂಬಲಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ಕುರಿತ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ನಾಲ್ವರು ಗಣ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು, ಅವರಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡಿದ್ದರೂ ಸಮಾಜದಲ್ಲಿ ತಮ್ಮ ವಿಶಿಷ್ಟ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ಸದಾನಂದನ್ ಮಾಸ್ಟರ್ (ಸಿ. ಸದಾನಂದನ್ ಮಾಸ್ಟರ್) ಒಬ್ಬರು.
ಪ್ರಧಾನಿ ನರೇಂದ್ರ ಮೋದಿ ಅವರು 75 ವರ್ಷ ಪೂರೈಸಿದ ಬಳಿಕ ಅಧಿಕಾರದಿಂದ ಕೆಳಗಿಳಿದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಧಾನಿ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದ್ದಾರೆ.