"ನಾನು ಸಂವಿಧಾನ ಬದಲಾಯಿಸುವುದಾಗಿ ಹೇಳಿಲ್ಲ. ಹಾಗೆ ಹೇಳಿದ್ದರೆ ತಕ್ಷಣ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚಿಗೆ ಮುಕ್ತಾಯಗೊಂಡ ಅಧಿವೇಶನದಲ್ಲಿ ಗದ್ದಲ ಸೃಷ್ಟಿಸಿದ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸಿದ ಕುರಿತು ಸ್ಪೀಕರ್ ಯು.ಟಿ. ಖಾದರ್ ತಮ್ಮ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ನಲ್ಲಿ ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು, ಸ್ಥಳೀಯ ವಾಹನಗಳಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ.
ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ (ಕಾನೂನು ಕ್ರಮ) ನಡೆಸಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅನುಮತಿ ನೀಡಿದ್ದಾರೆ