ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಇತರ ಪ್ರಭಾವಿ ನಾಯಕರ ಹೆಸರುಗಳನ್ನು ದುರ್ಬಳಕೆ ಮಾಡಿಕೊಂಡು, ಶ್ರೀಮಂತ ಕುಟುಂಬದ ಸುಮಾರು 20 ಮಹಿಳೆಯರಿಗೆ 30 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬೆಳಗಾವಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಕ್ಕೊಳಗಾದ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ, ತೀವ್ರ ಅಸಹನೆ ವ್ಯಕ್ತಪಡಿಸಿ ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ನಟ ಕಿಶೋರ್ ಅವರು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರಧಾನ ಮತ್ತು ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ "ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ" ಎಂಂದ ಮಾತನ್ನು ಪ್ರಶಂಸಿಸಿದ್ದಾರೆ.