ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿಗೆ ಸಹಾಯಕ ಪ್ರಾಧ್ಯಾಪಕಿಯಾಗಿ ಸ್ಥಳ ನಿಯುಕ್ತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶ್ರೀಮತಿ ಪೂರ್ಣಿಮಾ ಕೆ ಇವರನ್ನು ಈ ದಿನ ಆತ್ಮೀಯವಾಗಿ ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಸಮಸ್ಯೆಯಾಗಿರುವ ಕೆಂಪುಕಲ್ಲು ಮತ್ತು ಮರಳಿನ ಕೊರತೆ ನೀಗಿಸಲು ಜಿಲ್ಲೆಯ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಕನ್ನಡ ಚಿತ್ರರಂಗದಲ್ಲಿ ಭಾರೀ ಯಶಸ್ಸು ಗಳಿಸಿ, ಸಂಚಲನ ಮೂಡಿಸಿರುವ ಕರಾವಳಿಯ ಕಲಾವಿದರ ಬಹುನಿರೀಕ್ಷಿತ ಚಿತ್ರ 'ಸು ಫ್ರಂ ಸೋ' ಈಗ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುತ್ತಾ ಮುನ್ನುಗ್ಗುತ್ತಿದೆ.
ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಉಡುಪಿ, ಮತ್ತು ಕೊಲ್ಲೂರು ಬಗ್ಗೆ ಅವಹೇಳನಕಾರಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಕೇರಳದ ಇಬ್ಬರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ